ತರೀಕೆರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಟ್ಟಿಗೆ ಗ್ರಾಮದಲ್ಲಿ ಜ್ಞಾನವಿಕಾಸ ಸದಸ್ಯರಿಗೆ ‘ಅತಿಯಾದ ಮೊಬೈಲ್ ಬಳಕೆಯಿಂದ ಆಗುವ ಅನಾಹುತ, ಹೆಲ್ಮೆಟ್ ಬಳಕೆ’ ಕುರಿತು ಭದ್ರಾವತಿಯ ಬಿ.ಆರ್. ಅಂಬೇಡ್ಕರ್ ಜಾನಪದ ಕಲಾ ತಂಡ ಅವರಿಂದ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತಕುಮಾರ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ಸದಸ್ಯ ಸಿದ್ದಪ್ಪ, ವಲಯ ಮೇಲ್ವಿಚಾರಕ ರಮೇಶ್, ಒಕ್ಕೂಟದ ಅಧ್ಯಕ್ಷೆ ಜಯಂತಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುನೀತಾ, ಸೇವಾ ಪ್ರತಿನಿಧಿ ಉಷಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.