ADVERTISEMENT

ಪರೀಕ್ಷಾ ಸಮಯದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ: ತರೀಕೆರೆ ಪುರಸಭೆ ಸದಸ್ಯ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 6:39 IST
Last Updated 23 ಫೆಬ್ರುವರಿ 2026, 6:39 IST
ಟಿ. ದಾದಾಪೀರ್‌
ಟಿ. ದಾದಾಪೀರ್‌   

ತರೀಕೆರೆ: ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪದೇ ಪದೇ ವಿದ್ಯುತ್‌ ವ್ಯತ್ಯಯವಾಗುತ್ತಿರುವುದರಿಂದ ಪರೀಕ್ಷಾ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ಕುಗ್ಗಿದೆ ಎಂದು ಪುರಸಭೆ ಸದಸ್ಯ ಟಿ. ದಾದಾಪೀರ್‌ ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಯುವ ವಿವಿಧ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ರಾತ್ರಿ–ಹಗಲು ಎನ್ನದೇ ವಿದ್ಯಾಭ್ಯಾಸದಲ್ಲಿ ತೊಡಗಬೇಕಾದ ಸಮಯದಲ್ಲಿ, ವಿದ್ಯುತ್‌ ಪೂರೈಕೆಯಿಲ್ಲದೆ ಸಮಸ್ಯೆಯಾಗುತ್ತಿದೆ. ಕರೆಂಟ್‌ ಯಾವಾಗ ಹೋಗುತ್ತದೆ ಎನ್ನುವುದಕ್ಕಿಂತ ಯಾವಾಗ ಬರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುವ ಪರಿಸ್ಥಿತಿ ಬಂದಿದೆ’ ಎಂದಿದ್ದಾರೆ.

ಇದೀಗ ಪ್ರಥಮ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾರ್ಚ್‌ನಲ್ಲಿ ದ್ವಿತೀಯ ಪಿಯು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿದ್ದು, ಮೆಸ್ಕಾಂ ನಿರಂತರ ವಿದ್ಯುತ್‌ ಪೂರೈಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.