ತರೀಕೆರೆ: ‘ಮಕ್ಕಳು ಮತ್ತು ಶಿಕ್ಷಕರ ಮಾನಸಿಕ ತಲ್ಲಣಗಳು’ ಎಂಬ ವಿಷಯದ ಕುರಿತು ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷ ಡಾ. ಸಿ.ಆರ್. ಚಂದ್ರಶೇಖರ್ ಅವರೊಂದಿಗೆ ತಾಲ್ಲೂಕಿನ ಬೇಲೇನಹಳ್ಳಿ ಗ್ರಾಮದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಾದ ಕಾರ್ಯಕ್ರಮ ನಡೆಸಲಾಯಿತು.
ಸಿ.ಆರ್. ಚಂದ್ರಶೇಖರ್ ಮಾತನಾಡಿ, ಮಾನಸಿಕ ಆರೋಗ್ಯದ ಮಹತ್ವ ತಿಳಿಸಿಕೊಟ್ಟರು. ಸಂವಾದದಲ್ಲಿ ಪ್ರಶ್ನೆಗೆ ಉತ್ತರಿಸಿದ ಮಕ್ಕಳಿಗೆ ತಾವು ಬರೆದ ಪುಸ್ತಕಗಳನ್ನು ಬಹುಮಾನವಾಗಿ ನೀಡಿದರು.
ಜ್ಞಾನ-ವಿಜ್ಞಾನ ಸಮಿತಿಯ ಖಜಾಂಚಿ ಕೆ.ಬಿ. ಮಹಾದೇವಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷ ಲೋಕೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಸ್ವಾಗತಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅನಂತಪ್ಪ ಸಿ.ಆರ್., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಧರಣೇಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ನಂಜುಂಡಸ್ವಾಮಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.