
ಪ್ರಜಾವಾಣಿ ವಾರ್ತೆ
ನರಸಿಂಹರಾಜಪುರ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ.ಡಿ. ರಾಜೇಗೌಡ ಅವರನ್ನು ಮುಂದುವರೆಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಟಿ.ಡಿ. ರಾಜೇಗೌಡ ಅವರನ್ನು 2024ರ ಜನವರಿ 26ರಿಂದ ಎರಡುವರೆ ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿತ್ತು. 2026ರ ಜ. 26ರಂದು ಅವರ ಅವಧಿ ಪೂರ್ಣಗೊಂಡಿತ್ತು. 2026ರ ಜ. 28ರಂದು ಪುನಃ ಆದೇಶ ಹೊರಡಿಸಿರುವ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ, ಮುಂದಿನ ಆದೇಶದವರೆಗೆ ಮುಂದುವರೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.