ADVERTISEMENT

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಕಳೇಬರ ಪತ್ತೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 4:51 IST
Last Updated 7 ಜನವರಿ 2026, 4:51 IST
ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಹುಲಿಯ ಮೃತದೇಹ
ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಹುಲಿಯ ಮೃತದೇಹ   

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಗಣತಿಯ ವೇಳೆ ಗಂಡು ಹುಲಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೆಬ್ಬೆ ವಲಯ ವ್ಯಾಪ್ತಿಯ ಕಳ್ಳ ಬೇಟೆ ನಿಗ್ರಹ ಶಿಬಿರದ ಸಮೀಪದ ಗಂಗೆ ಗಿರಿ ಸರ್ವೆ ನಂಬರ್‌–15ರಲ್ಲಿ ಅರೆಬರೆ ಕೊಳೆತ ಸ್ಥಿತಿಯಲ್ಲಿ ದೊರೆತಿದೆ. ಹುಲಿಗೆ 10 ವರ್ಷ ವಯಸ್ಸಿರಬಹುದು. ಎರಡು ಹುಲಿಗಳ ಕಾದಾಟದಲ್ಲಿ ನಿತ್ರಾಣಗೊಂಡು ಹುಲಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ ಎಂದು ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT