ನರಸಿಂಹರಾಜಪುರ: ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಪಟ್ಟಣದ ಡಿ.ಸಿ.ಎಂ.ಸಿ ಶಾಲೆ ಆವರಣದಲ್ಲಿ ಜ.25ರಂದು ಬೆಳಿಗ್ಗೆ 10.30ಕ್ಕೆ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ ಶಾಮಲಾ ಸತೀಶ್ ತಿಳಿಸಿದ್ದಾರೆ.
‘ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಹುಲಿಕಲ್ ನಟರಾಜ್ ಅವರಿಂದ ಪವಾಡ ರಹಸ್ಯ ಬಯಲು ಹಾಗೂ ಉಪನ್ಯಾಸ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಟಿ.ರಾಜೇಂದ್ರ ಚಾಲನೆ ನೀಡುವರು. ಸಂಘದ ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್ ಕರ್ನಾಟಕ ವೈಜ್ಞಾನಿಕ ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಸುರೇಶ್, ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಮಲಾ ಸತೀಶ್, ಕಾರ್ಯದರ್ಶಿ ಲೇಖಾ ವಸಂತ್, ಖಜಾಂಚಿ ಭಾರತಿ ಚಂದ್ರೇಗೌಡ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.