ಮೂಡಿಗೆರೆ (ಚಿಕ್ಕಮಗಳೂರು): ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನಗೂಲ್ ಗ್ರಾಮದ ಬಳಿ ಶನಿವಾರ ಬೆಳಿಗ್ಗೆ ಪ್ರವಾಸಿಗರು ಸಂಚರಿಸುತ್ತಿದ್ದ ಖಾಸಗಿ ಬಸ್ ಉರುಳಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಅವಘಡ ನಡೆದಿದೆ.
ಖಾಸಗಿ ಕಂಪನಿಯಲ್ಲಿ ಉದ್ಯೋಗಿಗಳಾಗಿರುವ ಸುಮಾರು 40 ಮಂದಿ ಯುವಕ – ಯುವತಿಯರು ನೇತ್ರಾವತಿ ಪೀಕ್‌ಗೆ ಚಾರಣಕ್ಕಾಗಿ ಬಂದಿದ್ದರು. ಬಾಳೂರು– ಕೊಟ್ಟಿಗೆಹಾರ ರಸ್ತೆಯ ದೇವನಗೂಲ್ ಗ್ರಾಮದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಉರುಳಿದೆ.
ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಪಟ್ಟಣದ ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಚಿಕ್ಕಮಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಅಪಘಾತದಿಂದ ಕೊಟ್ಟಿಗೆಹಾರ– ಬಾಳೂರು ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ತೊಂದರೆ ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.