ADVERTISEMENT

ತುಡುಕೂರು: ಕೆರೆ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 2 ಮೇ 2025, 14:26 IST
Last Updated 2 ಮೇ 2025, 14:26 IST
ಒತ್ತುವರಿಯಾಗಿದ್ದ ಕೆರೆಯನ್ನು ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಶುಕ್ರವಾರ ತೆರವುಗೊಳಿಸಲಾಯಿತು
ಒತ್ತುವರಿಯಾಗಿದ್ದ ಕೆರೆಯನ್ನು ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಶುಕ್ರವಾರ ತೆರವುಗೊಳಿಸಲಾಯಿತು   

ಆಲ್ದೂರು: ಸಮೀಪದ ತುಡುಕೂರು ಸರ್ವೆ ನಂಬರ್ 132ರಲ್ಲಿ ಒತ್ತುವರಿಯಾಗಿದ್ದ ಕೆರೆ ಜಾಗವನ್ನು ಶುಕ್ರವಾರ ಕಂದಾಯ ಇಲಾಖೆ ಮತ್ತು ಪಂಚಾಯಿತಿ ವತಿಯಿಂದ  ತೆರವುಗೊಳಿಸಲಾಯಿತು. ಕಂದಾಯ ಅಧಿಕಾರಿ ವೆಂಕಟೇಶ್, ಪಿಡಿಒ ಶಂಶೂನ್ ನಹರ್, ಗ್ರಾಮ ಲೆಕ್ಕಾಧಿಕಾರಿ ಸಾರಿಕಾ, ವಸಂತ್ ಕುಮಾರ್, ಸಿಬ್ಬಂದಿ  ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

‘ಇನ್ನೂ ಹಲವು ಕೆರೆಗಳ ಒತ್ತುವರಿ ತೆರವುಗೊಳಿಸಲು ಆದೇಶವಾಗಿದೆ. ಕೆರೆ  ಜಾಗವನ್ನು ಒತ್ತುವರಿ ಮಾಡಿಕೊಂಡವರು ತೆರವು ಕಾರ್ಯಕ್ಕೆ ಸಹಕರಿಸಬೇಕು’ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT