ADVERTISEMENT

ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ- ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 5:48 IST
Last Updated 24 ಸೆಪ್ಟೆಂಬರ್ 2022, 5:48 IST
ಯಗಟಿ ಪೊಲೀಸರು ಇಬ್ಬರನ್ನು ಬಂಧಿಸಿ ಟ್ರಾಕ್ಟರ್ ಟ್ರೈಲರ್ ಅನ್ನು ವಶಪಡಿಸಿಕೊಂಡಿದ್ದಾರೆ.
ಯಗಟಿ ಪೊಲೀಸರು ಇಬ್ಬರನ್ನು ಬಂಧಿಸಿ ಟ್ರಾಕ್ಟರ್ ಟ್ರೈಲರ್ ಅನ್ನು ವಶಪಡಿಸಿಕೊಂಡಿದ್ದಾರೆ.   

ಕಡೂರು: ಟ್ರಾಕ್ಟರ್ ಟ್ರೈಲರ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಯಗಟಿ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಉಡುಗೆರೆಯ ಪ್ರವೀಣ್ ಕುಮಾರ್ ಮತ್ತು ತರೀಕೆರೆ ತಾಲ್ಲೂಕಿನ ವರ್ತಿಗುಂಡಿಯ ಪ್ರಕಾಶ್ ಬಂಧಿತರು. ಆರೋಪಿಗಳಿಂದ ₹1.5 ಲಕ್ಷ ಮೌಲ್ಯದ ಟ್ರೈಲರ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಯಗಟಿ ಪಿಎಸೈ ಶಶಿಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.