ಚಿಕ್ಕಮಗಳೂರು: ಜಿಲ್ಲೆಯ ಕಳಸ ಸಮೀಪದ ನೇರಂಕಿ ಬಳಿ ಕಾಡುಕೋಣ ಬೈಕಿಗೆ ತಿವಿಯಲು ಮುಂದಾದಾಗ ಸವಾರರಿಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ನೇರಂಕಿ ಗ್ರಾಮದ ಮಂಗಳಾ (16) ಮತ್ತು ಸಂದೀಪ್ (23) ಗಾಯಗೊಂಡಿದ್ದಾರೆ. ಇಬ್ಬರನ್ನು ಚಿಕಿತ್ಸೆಗೆ ಮಂಗಳೂರಿಗೆ ಒಯ್ಯಲಾಗಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಇವರಿಬ್ಬರು ನೇರಂಕಿಯಿಂದ ಹಿರೇಬೈಲಿಗೆ ತೆರಳುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.