ADVERTISEMENT

ಶೃಂಗೇರಿಯಲ್ಲಿ ಯುಗಾದಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2025, 15:19 IST
Last Updated 31 ಮಾರ್ಚ್ 2025, 15:19 IST
ಶೃಂಗೇರಿ ಶಾರದಾ ಪೀಠದಲ್ಲಿ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತೀ ಸ್ವಾಮೀಜಿಯವರು ಪೀಠದ 33ನೇ ಗುರುಗಳಾದ ಸಚ್ಚಿದಾನಂದ ಶಿವಾಭಿನವ ನರಸಿಂಹಭಾರತೀ ಸ್ವಾಮೀಜಿಯವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು
ಶೃಂಗೇರಿ ಶಾರದಾ ಪೀಠದಲ್ಲಿ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತೀ ಸ್ವಾಮೀಜಿಯವರು ಪೀಠದ 33ನೇ ಗುರುಗಳಾದ ಸಚ್ಚಿದಾನಂದ ಶಿವಾಭಿನವ ನರಸಿಂಹಭಾರತೀ ಸ್ವಾಮೀಜಿಯವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು   

ಶೃಂಗೇರಿ: ಯುಗಾದಿ ಹಬ್ಬದ ಅಂಗವಾಗಿ ಭಾನುವಾರ ಬೆಳಗಿನ ಜಾವ ಭಕ್ತರು ಶಾರದಾ ಮಠಕ್ಕೆ ತೆರಳಿ ಶಾರದಾಂಬೆಯ ವಿಶೇಷ ದರ್ಶನ ಪಡೆದರು.

ಮನೆಗಳನ್ನು ಮಾವಿನ ಎಲೆ, ರಂಗೋಲಿಯಿಂದ ಅಲಂಕರಿಸಲಾಗಿತ್ತು. ಯುಗಾದಿ ಪ್ರಯುಕ್ತ  ಆರು ರುಚಿಯ ಅಡುಗೆ ಸವಿದರು. ಬೇವು-ಬೆಲ್ಲವನ್ನು ಅಕ್ಕ ಪಕ್ಕದ ಮನೆಯವರೊಂದಿಗೆ ಹಂಚಿಕೊಂಡು ಸಂಭ್ರಮಿಸಿದರು. 

ಶೃಂಗೇರಿ ಶಾರದಾ ಮಠದಲ್ಲಿ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತಿ  ಸ್ವಾಮೀಜಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದರು. ಚಂದ್ರಮೌಳೇಶ್ವರ ಸ್ವಾಮಿಗೆ  ಪೂಜೆ ಸಲ್ಲಿಸಲಾಯಿತು.  ಸಂಜೆ ಗುರು ನಿವಾಸದಲ್ಲಿ ಚಂದ್ರಮೌಳೇಶ್ವರ ಸ್ವಾಮಿ ಪೂಜೆ ಮತ್ತು ಜನರು ಕಾಣಿಕೆ ಸಮರ್ಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.