ಬೆಟ್ಟತಾವರೆಕೆರೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಜಿ.ಎಚ್. ಶ್ರೀನಿವಾಸ್ ಉದ್ಘಾಟಿಸಿದರು
ತರೀಕೆರೆ: ಗ್ರಾಮಸ್ಥರ ಬೇಡಿಕೆಯಂತೆ ಭದ್ರಾ ಮೇಲ್ದಂಡೆ ಕಾಲುವೆಯಿಂದ ಬೇಸಿಗೆಯಲ್ಲಿ ನೀರಿನ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹದ ಕೊಠಡಿ ಉದ್ಘಾಟನೆ, ಶ್ರೀಸಿರಿ ಜೀವ ಜಲ ಶುದ್ಧಗಂಗಾ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನೆ, ರಂಗ ಮಂದಿರ ಉದ್ಘಾಟನೆ, ಎಫ್.ಎಲ್.ಎನ್. ಕಲಿಕಾ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.
ಜಾಗ ಮಂಜೂರು ಮಾಡಿ ಆರೋಗ್ಯ ಕೇಂದ್ರವನ್ನು ನಿರ್ಮಿಸಲಾಗುವುದು. ಜನರ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಶಂಕು ಸ್ಥಾಪನೆ ಮಾಡಲಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕೊಠಡಿ ಸೇರಿದಂತೆ ಮೂಲಸವಲತ್ತು ಕಲ್ಪಿಸಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಮಾತನಾಡಿ, ನ್ಯುಮೋನಿಯಾದಿಂದ ಬಳಲುತ್ತಿರುವ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ₹ 1 ಲಕ್ಷ ನೆರವು ನೀಡಲಾಗಿದೆ ಎಂದರು.
ತಾಲೂಕು ಪಂಚಾಯಿತಿ ಇಒ ದೇವೇಂದ್ರಪ್ಪ, ಅಜ್ಜಂಪುರ ತಾ.ಪಂ ಇಒ ಎಂ.ಕೆ.ವಿಜಯಕುಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್.ಅನಂತಪ್ಪ, ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಧರಣೇಶ್, ತರೀಕೆರೆ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬಿ.ಜಿ.ಗೌರೀಶ್, ಎಸ್‌ಡಿಎಂಸಿ ಅಧ್ಯಕ್ಷ ಬಿ.ಆರ್.ಆನಂದ, ಕೋರನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಮಂಜನಾಯ್ಕ, ಸದಸ್ಯೆ ಸುಮಿತ್ರಮ್ಮ, ಪಿಡಿಒ ಚೇತನ್, ಸಿಆರ್‌ಪಿ ಮಮತಾ, ಮುಖ್ಯಶಿಕ್ಷಕಿ ಉಮಾ, ಸಹ ಶಿಕ್ಷಕ ಕುಮಾರಸ್ವಾಮಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.