ADVERTISEMENT

‘ಸರ್ಜಾ ಹನುಮಪ್ಪ ನಾಯಕ ಪುತ್ಥಳಿ ನಿರ್ಮಾಣಕ್ಕೆ ಬದ್ಧ’

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 3:02 IST
Last Updated 10 ಅಕ್ಟೋಬರ್ 2022, 3:02 IST
ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿದರು
ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿದರು   

ತರೀಕೆರೆ: ಪಟ್ಟಣದ ಸರ್ಜಾ ಹನುಮಪ್ಪ ನಾಯಕ ಬಸ್ ನಿಲ್ದಾಣದ ಆವರಣದಲ್ಲಿ ಪಟ್ಟಣದ ಅಭಿವೃದ್ದಿಗೆ ಶ್ರಮಿಸಿದ ಸರ್ಜಾ ಹನುಮಪ್ಪ ನಾಯಕನ ಪುತ್ಥಳಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಇಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಮಹರ್ಷೀ ವಾಲ್ಮೀಕಿ ಜಯಂತಿಯಲ್ಲಿ ಅವರು ಮಾತನಾಡಿರು.

ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಮಾಡಿದೆ ಎಂದರು. ತಹಶೀಲ್ದಾರ್ ಪೂರ್ಣಿಮಾ ಮಾತನಾಡಿ ಸಾಮಾನ್ಯ ವ್ಯಕ್ತಿಯಿಂದ ವಾಲ್ಮೀಕಿ ಮಹರ್ಷಿಯಾಗಿದ್ದಾರೆ. ಅವರ ಆದರ್ಶಗಳು ಅನುಕರಣೀಯ ಎಂದರು.

ADVERTISEMENT

ಪುರಸಭೆ ಅಧ್ಯಕ್ಷೆ ಕಮಲ ರಾಜೇಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯೋಗೀಶ್ ಮಾತನಾಡಿದರು. ಶಿಕ್ಷಕ ಚೇತನ್ ಗೌಡ ಉಪನ್ಯಾಸ ನೀಡಿದರು. ಪುರಸಭೆ ಮುಖ್ಯಧಿಕಾರಿ ಮಹಾಂತೇಶ್, ಪುರಸಭೆ ಸದಸ್ಯೆ ಪಾರ್ವತಮ್ಮ, ಉಪ ತಹಶೀಲ್ದಾರ್ ಗೋವಿಂದಪ್ಪ, ಸಮಾಜ ಕಲ್ಯಾಣ ಇಲಾಖೆಯ ಮಂಜುನಾಥ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಎಸ್.ಗಣೇಶ್, ತೋಟಗಾರಿಕೆ ಸಹಾಯಕ ನಿರ್ದೇಶಕ ಯತಿರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.