ADVERTISEMENT

ಚಿಕ್ಕಮಗಳೂರು | ಶರಣ್ ಪಂಪ್‌ವೆಲ್‌ ಪ್ರವೇಶಕ್ಕೆ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 4:04 IST
Last Updated 7 ಜುಲೈ 2025, 4:04 IST
  ಶರಣ್‌ ಪಂಪ್‌ವೆಲ್‌ 
  ಶರಣ್‌ ಪಂಪ್‌ವೆಲ್‌    

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೇಲ್ ಚಿಕ್ಕಮಗಳೂರು ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ಒಂದು ತಿಂಗಳು ನಿರ್ಬಂಧ ಹೇರಿದೆ. ಆಗಸ್ಟ್‌ 4ರ ತನಕ ಜಿಲ್ಲೆಗೆ ಭೇಟಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

‘ಪಂಪ್‌ ವೇಲ್ ಅವರನ್ನು ಜಿಲ್ಲೆಗೆ ಕರೆಸಿ ಬೈಟೆಕ್ ನಡೆಸಲು ಕೆಲ ಸಂಘಟನೆಗಳು ಉದ್ದೇಶಿಸಿರುವ ಮಾಹಿತಿ ಲಭ್ಯವಾಗಿದೆ. ಬಲಪಂಥೀಯ ವಿಚಾರಗಳಿಂದ ಪ್ರಭಾವಿತರಾಗಿ ಕೋಮು ದ್ವೇಷ ಹರಡುವ ಪ್ರವೃತ್ತಿ ಉಳ್ಳವರಾಗಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಮನೋಭಾವ ಉಳ್ಳವರಾಗಿದ್ದಾರೆ. ಅವರ ವಿರುದ್ಧ ರಾಜ್ಯದ ವಿವಿಧೆಡೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ’ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

‘ಇವರು ಬೈಟೆಕ್‌ಗಳಲ್ಲಿ ಭಾಗವಹಿಸಿದರೆ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಸಂಭವ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಸಲ್ಲಿಸಿದ್ದಾರೆ. ಆದ್ದರಿಂದ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ವಿವರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.