ADVERTISEMENT

ವಿದ್ಯಾ ಕಾಫಿ ಕ್ಯೂರಿಂಗ್: ‘ಪ್ರಜಾವಾಣಿ’ ಕ್ಯಾಲೆಂಡರ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 6:31 IST
Last Updated 12 ಜನವರಿ 2026, 6:31 IST
ಅಂಬಳೆ ಹೋಬಳಿಯ ಆರದವಳ್ಳಿ ಗ್ರಾಮದಲ್ಲಿರುವ ವಿದ್ಯಾ ಕಾಫಿ ಕ್ಯೂರಿಂಗ್ ಶಾಖಾ ಕಚೇರಿಯಲ್ಲಿ ಭಾನುವಾರ ‘ಪ್ರಜಾವಾಣಿ’ ಸಹಯೋಗದಲ್ಲಿ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು
ಅಂಬಳೆ ಹೋಬಳಿಯ ಆರದವಳ್ಳಿ ಗ್ರಾಮದಲ್ಲಿರುವ ವಿದ್ಯಾ ಕಾಫಿ ಕ್ಯೂರಿಂಗ್ ಶಾಖಾ ಕಚೇರಿಯಲ್ಲಿ ಭಾನುವಾರ ‘ಪ್ರಜಾವಾಣಿ’ ಸಹಯೋಗದಲ್ಲಿ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು   

‌ಆಲ್ದೂರು: ಅಂಬಳೆ ಹೋಬಳಿಯ ಆರದವಳ್ಳಿ ಗ್ರಾಮದಲ್ಲಿರುವ ವಿದ್ಯಾ ಕಾಫಿ ಕ್ಯೂರಿಂಗ್ ಶಾಖಾ ಕಚೇರಿಯಲ್ಲಿ ಭಾನುವಾರ ‘ಪ್ರಜಾವಾಣಿ’ ಸಹಯೋಗದಲ್ಲಿ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ವಿದ್ಯಾ ಕಾಫಿ ಸಂಸ್ಥೆಯ ಮುಖ್ಯಸ್ಥ ಕೆ. ಶ್ಯಾಮ್‌ಪ್ರಸಾದ್ ಮಾತನಾಡಿ, ‘ಗುಣಮಟ್ಟದ ಕಾಫಿಯನ್ನು ಜಾಗತಿಕ ಮಾರುಕಟ್ಟೆಗೆ ಒದಗಿಸುವ ಉದ್ದೇಶದಿಂದ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಸಂಸ್ಥೆಯ ಶಾಖೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಶ್ರಮವೇ ಯಶಸ್ಸಿನ ಮೂಲವಾಗಿದ್ದು, ಗುಣಮಟ್ಟಕ್ಕೆ ಸದಾ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಕಾಫಿ ಬ್ರಾಂಡ್‌ನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದ್ದು, ಕರ್ನಾಟಕದ ವಿಶ್ವಾಸಾರ್ಹ ಪತ್ರಿಕೆಗಳಾದ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಮೂಲಕ ಉತ್ಪನ್ನಗಳ ಮಾಹಿತಿಯನ್ನು ಜನರಿಗೆ ತಲುಪಿಸುವುದು ಮೊದಲ ಹೆಜ್ಜೆಯಾಗಿದೆ ಎಂದರು. ಈ ಸಂದರ್ಭ ಸಂಸ್ಥೆ ಹಾಗೂ ‘ಪ್ರಜಾವಾಣಿ’ ಪತ್ರಿಕೆಯ ಪರವಾಗಿ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ADVERTISEMENT

ಕಾರ್ಯಕ್ರಮದಲ್ಲಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ವಿತರಕ ಶ್ರೀಧರ್ ಮೋಹನ್, ವಿದ್ಯಾ ಕಾಫಿ ಕ್ಯೂರಿಂಗ್ ನಿರ್ವಹಣಾ ಮುಖ್ಯಸ್ಥ ಭಾನುಪ್ರಕಾಶ್, ಅರೆಕಾಲಿಕ ವರದಿಗಾರ ಜೋಸೆಫ್ ಎಂ. ಆಲ್ದೂರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.