ADVERTISEMENT

ಗ್ರಾಮ, ಹೋಬಳಿ, ತಾಲ್ಲೂಕು, ಜಿಲ್ಲಾ ಹಂತದಲ್ಲಿ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 16:33 IST
Last Updated 28 ಸೆಪ್ಟೆಂಬರ್ 2022, 16:33 IST
ಅಜ್ಜಂಪುರ ತಾಲ್ಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ‘ಹಿರೇನಲ್ಲೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪದಾಧಿಕಾರಿಗಳ ಸೇವಾದೀಕ್ಷಾ ಸಮಾರಂಭ ನಡೆಯಿತು. ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮತ್ತಿತರರಿದ್ದರು.
ಅಜ್ಜಂಪುರ ತಾಲ್ಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ‘ಹಿರೇನಲ್ಲೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪದಾಧಿಕಾರಿಗಳ ಸೇವಾದೀಕ್ಷಾ ಸಮಾರಂಭ ನಡೆಯಿತು. ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮತ್ತಿತರರಿದ್ದರು.   

ಅಜ್ಜಂಪುರ: ‘ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕಗಳನ್ನು ಜಿಲ್ಲಾ, ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ಪ್ರಾರಂಭಿಸಲಾಗಿದೆ. ಶೀಘ್ರದಲ್ಲಿಯೇ ಪ್ರತಿ ಹಂತದಲ್ಲೂ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು’ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ತಾಲ್ಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ನಡೆದ ‘ಹಿರೇನಲ್ಲೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪದಾಧಿಕಾರಿಗಳ ಸೇವಾದೀಕ್ಷಾ ಸಮಾರಂಭ’ದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಮಹಿಳಾ ಘಟಕದ ಪ್ರಧಾನ ಸಂಚಾಲಕಿ ವಿಶಾಲಾಕ್ಷಮ್ಮ ಭುವನೇಶ್ವರಿ ಭಾವ ಚಿತ್ರ ಅನಾವರಣಗೊಳಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮ ಚಂದ್ರಪ್ಪ ಪುಷ್ಪ ನಮನ ಸಲ್ಲಿಸಿದರು.

ADVERTISEMENT

ಪರಿಷತ್ತಿನ ಕಡೂರು ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆ ಲತಾ ರಾಜಶೇಖರ್, ಕನ್ನಡ ಧ್ವಜವನ್ನು ಹಿರೇನಲ್ಲೂರು ಹೋಬಳಿ ಘಟಕ ಅಧ್ಯಕ್ಷೆ ಮಂಜುಳಾ ಜಯಣ್ಣ ಅವರಿಗೆ ಹಸ್ತಾಂತರಿಸಿದರು.

ಸಂಚಾಲಕಿ ವಿಶಾಲಾಕ್ಷಮ್ಮ ಹೋಬಳಿ ಮಹಿಳಾ ಘಟಕದ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಪರಿಷತ್ತಿನ ಕೋಶಾಧ್ಯಕ್ಷ ಬಿ.‌ಪ್ರಕಾಶ್, ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ, ಜಿಲ್ಲಾ ಸಂಚಾಲಕ ಇಮ್ರಾನ್ ಅಹಮದ್ ಬೇಗ್ , ಆರ್. ಜಿ. ಕೃಷ್ಣಸ್ವಾಮಿ ಮಾತನಾಡಿದರು.

ಪರಿಷತ್ತಿನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸವಿತಾ ಸತ್ಯನಾರಾಯಣ, ಹೋಬಳಿ ಘಟಕ ಗೌರವಾಧ್ಯಕ್ಷೆ ಬಾಸೂರು ಲಲಿತಮ್ಮ ಈಶ್ವರಪ್ಪ, ಸವಿತ, ಸಾವಿತ್ರಿ, ರಶ್ಮಿ, ಪಂಚಾಯಿತಿ ಉಪಾಧ್ಯಕ್ಷೆ ಸುಧಾ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.