ADVERTISEMENT

ಬಾಳೆಹೊನ್ನೂರು | ರಸ್ತೆ ದುರಸ್ತಿ ಮಾಡಿಸಿದ ಗ್ರಾಮಸ್ಥರು!

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 6:01 IST
Last Updated 6 ಜನವರಿ 2026, 6:01 IST
ಬಾಳೆಹೊನ್ನೂರು ಸಮೀಪದ ಹುಯಿಗೆರೆ-ಮಣಬೂರು ಸಂಪರ್ಕ ಕಲ್ಪಿಸುವ ರಸ್ತೆಯ ದುರಸ್ತಿ ಕಾಮಗಾರಿ ಕೈಗೊಂಡಿರುವುದು
ಬಾಳೆಹೊನ್ನೂರು ಸಮೀಪದ ಹುಯಿಗೆರೆ-ಮಣಬೂರು ಸಂಪರ್ಕ ಕಲ್ಪಿಸುವ ರಸ್ತೆಯ ದುರಸ್ತಿ ಕಾಮಗಾರಿ ಕೈಗೊಂಡಿರುವುದು   

ಬಾಳೆಹೊನ್ನೂರು: ಖಾಂಡ್ಯ ಹೋಬಳಿ ವ್ಯಾಪ್ತಿಯ ಹುಯಿಗೆರೆಯಿಂದ ಮಣಬೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಎರಡೂ ಗ್ರಾಮಗಳ ಜನರು ಸುಮಾರು ಮೂರುವರೆ ಕಿ.ಮೀ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ್ದಾರೆ.

‘ಅತಿಯಾದ ಮಳೆಯಿಂದ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸಂಚಾರ ಕಷ್ಟವಾಗಿತ್ತು. ಆಟೊ ಹಾಗೂ ಇತರೆ ಬಾಡಿಗೆ ವಾಹನಗಳು ಗ್ರಾಮಕ್ಕೆ ಬರಲು ಹಿಂದೇಟು ಹಾಕುತ್ತಿದ್ವು. ರಸ್ತೆ ದುರಸ್ತಿಗೆ ಗ್ರಾಮ ಪಂಚಾಯಿತಿ, ಶಾಸಕರ ಗಮನ ಸೆಳೆದರೂ ಸ್ಪಂದಿಸಿರಲಿಲ್ಲ. ಇದರಿಂದ ಬೇಸತ್ತು ಸುಮಾರು ₹1 ಲಕ್ಷಕ್ಕೂ ಅಧಿಕ ಹಣ ಒಟ್ಟುಗೂಡಿಸಿ, ಜೆಸಿಬಿ, ಟ್ರಾಕ್ಟರ್ ಬಳಸಿ ಮಣ್ಣು–ಜಲ್ಲಿ ಹಾಕಿ ರಸ್ತೆ ದುರಸ್ತಿ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

‘ಮಳೆಗಾಲದವರೆಗೆ ರಸ್ತೆಯಲ್ಲಿ ವಾಹನಗಳು ಸರಾಗವಾಗಿ ಓಡಾಡಬಹುದು. ಮತ್ತೆ ಅದೇ ಸ್ಥಿತಿ ಉದ್ಭವಿಸಲಿದೆ. ಖಾಂಡ್ಯ ಹೋಬಳಿ ಭಾಗದಲ್ಲಿ ಪ್ರಭಾವಿ ಕಾಂಗ್ರೆಸ್ ಮುಖಂಡರು ಇಲ್ಲದ ಕಾರಣ ರಸ್ತೆಗಳಿಗೆ ಈ ದುಸ್ಥಿತಿ ಉಂಟಾಗಿದೆ. ಶಾಸಕ ಟಿ.ಡಿ.ರಾಜೇಗೌಡ ಅವರ ತವರೂರಾದ ಬಾಸಾಪುರವು ಇದೇ ಹೋಬಳಿ ವ್ಯಾಪ್ತಿಗೆ ಬರುತ್ತದೆ. ಆದರೂ ರಸ್ತೆ ಅವ್ಯವಸ್ಥೆ ಬಗ್ಗೆ ಗಮನ ಹರಿಸುತ್ತಿಲ್ಲ’ ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ದೂರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.