ಜಯಪುರ(ಬಾಳೆಹೊನ್ನೂರು): ಸ್ಮಶಾನ ಒತ್ತುವರಿ ಸಂಬಂಧಿಸಿದ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದ್ದರೂ ಜಯಪುರ ಗ್ರಾಮ ಪಂಚಾಯಿತಿ ವತಿಯಿಂದ ಅಕ್ರಮವಾಗಿ ಕಾಮಗಾರಿ ನಡೆಸಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾರ್ಮಿಕ ಮುಖಂಡ ಮುನಿಯಾಂಡಿ ಆರೋಪಿಸಿದ್ದಾರೆ.
‘ಸರ್ವೇ ನಂ 203ರಲ್ಲಿ 5 ಗುಂಟೆ ಜಾಗವನ್ನು ಜಿಲ್ಲಾಧಿಕಾರಿ ಸ್ಮಶಾನಕ್ಕೆ ನಿಗದಿ ಮಾಡಿ ಆದೇಶಿಸಿದ್ದಾರೆ. ಸರ್ವೇ ನಂ 86ರಲ್ಲಿ ಹಿಂದೂ ರುದ್ರಭೂಮಿ ಇದೆ. ಇಷ್ಟೆಲ್ಲಾ ಇದ್ದರೂ ಅದನ್ನು ಪರಿಗಣಿಸದೆ ಜಯಪುರ ಗ್ರಾಮ ಪಂಚಾಯಿತಿಯವರು ನಮ್ಮ ಮನೆಯ ಪಕ್ಕದಲ್ಲೇ ಸ್ಮಶಾನ ನಿರ್ಮಿಸಿ ತೊಂದರೆ ನೀಡುತ್ತಿದ್ದಾರೆ.ಈ ಬಗ್ಗೆ ಸ್ಪಷ್ಟ ದಾಖಲೆಯೊಂದಿಗೆ ನ್ಯಾಯಾಲಯದ ಮೊರೆ ಹೋಗಿದ್ದೇನೆ.ಕಳೆದ 20 ವರ್ಷದಿಂದ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದೇನೆ.ಇದೆಲ್ಲ ಗೊತ್ತಿದ್ದರೂ ಪಂಚಾಯಿತಿಯವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಓಡಾಡಲು ಜಾಗ ಇಲ್ಲದಂತೆ ಎದುರು ಭಾಗದಲ್ಲಿ ಗೇಟ್ ನಿರ್ಮಿಸಿದ್ದಾರೆ.ಈ ಬಗ್ಗೆ ಪೊಲೀಸ್ ಠಾಣೆ, ಕೊಪ್ಪ ತಹಶೀಲ್ದಾರರಿಗೂ ದೂರು ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.