ADVERTISEMENT

ಹಿಂದೂ ಬ್ರಿಗೇಡ್‌ಗೂ ವಿಶ್ವ ಹಿಂದೂ ಪರಿಷತ್‌ಗೂ ಸಂಬಂಧವಿಲ್ಲ: ಮಹೇಂದ್ರ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 5:04 IST
Last Updated 17 ಆಗಸ್ಟ್ 2022, 5:04 IST
ಆರ್.ಡಿ.ಮಹೇಂದ್ರ
ಆರ್.ಡಿ.ಮಹೇಂದ್ರ   

ಬಾಳೆಹೊನ್ನೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಕಾರ್ಯ ಚಟುವಟಿಕೆ ಆರಂಭಿಸಿರುವ ಹಿಂದೂ ಬ್ರಿಗೇಡ್‍ಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಆರ್.ಡಿ. ಮಹೇಂದ್ರ ತಿಳಿಸಿದ್ದಾರೆ.

ಹಿಂದೂ ಬ್ರಿಗೇಡ್ ಆ.25ರಂದು ಖಾಂಡ್ಯ ಹೋಬಳಿ ಕಡಬಗೆರೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಮತ್ತು ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದು, ಆಮಂತ್ರಣ ಪತ್ರಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಹೆಸರನ್ನು ಬಳಸಿದೆ. ಆ ಕಾರ್ಯಕ್ರಮಕ್ಕೂ ವಿಶ್ವ ಹಿಂದೂ ಪರಿಷತ್, ಬಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸಂಘಟನೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲೆಯ ಹಲವಾರು ಭಾಗದಲ್ಲಿ ಅಖಂಡ ಭಾರತ ಸಂಕಲ್ಪ ದಿನವನ್ನು ಆಚರಿಸಿದ್ದು, ಸುಮಾರು 14 ಭಾಗದಲ್ಲಿ ಪಂಜಿನ ಮೆರವಣಿಗೆಗಳು ಮತ್ತು ಧಾರ್ಮಿಕ ಸಭೆಗಳನ್ನು ನಡೆಸಲಾಗಿದೆ. ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.18 ರಿಂದ ಸೆ.11ರ ವರೆಗೆ ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮೊಸರು ಕುಡಿಕೆ ಮತ್ತು ಮಲ್ಲಗಂಬ ಏರುವ ಕಾರ್ಯಕ್ರಮ ಮತ್ತು ಪುಟಾಣಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.