ADVERTISEMENT

ತರೀಕೆರೆ: ವಾಲಿಬಾಲ್ ಟೂರ್ನಿ- ಮೈಸೂರು ತಂಡ ಪ್ರಥಮ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 7:13 IST
Last Updated 21 ಅಕ್ಟೋಬರ್ 2025, 7:13 IST
ತರೀಕೆರೆಯಲ್ಲಿ ನಡೆದ ವಾಲಿಬಾಲ್ ಟೂರ್ನಿಯ ವಿಜೇತ ತಂಡಗಳಿಗೆ ಶಾಸಕ ಜಿ.ಎಚ್. ಶ್ರೀನಿವಾಸ್ ಬಹುಮಾನ ವಿತರಿಸಿದರು
ತರೀಕೆರೆಯಲ್ಲಿ ನಡೆದ ವಾಲಿಬಾಲ್ ಟೂರ್ನಿಯ ವಿಜೇತ ತಂಡಗಳಿಗೆ ಶಾಸಕ ಜಿ.ಎಚ್. ಶ್ರೀನಿವಾಸ್ ಬಹುಮಾನ ವಿತರಿಸಿದರು   

ತರೀಕೆರೆ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ವಿವಿಧ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ 14 ಹಾಗೂ 17 ವರ್ಷ ವಯೋಮಿತಿಯೊಳಗಿನ ಬಾಲಕರ ಮತ್ತು ಬಾಲಕಿಯರ ಹೊನಲು ಬೆಳಕಿನ ರಾಜ್ಯಮಟ್ಟದ ವಾಲಿಬಾಲ್ ಟೂರ್ನಿಯ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿತು.

ಬೆಳಗಾವಿ ತಂಡ ದ್ವಿತೀಯ ಸ್ಥಾನ ಪಡೆಯಿತು. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ, ಬೆಂಗಳೂರು ತಂಡ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವು.

14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ, ಕಲಬುರಗಿ ದ್ವಿತೀಯ, 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಂಗಳೂರು ಪ್ರಥಮ, ಮೈಸೂರು ದ್ವಿತೀಯ ಸ್ಥಾನ ಗಳಿಸಿದವು.

ADVERTISEMENT

ಶಾಸಕ ಜಿ.ಎಚ್.ಶ್ರೀನಿವಾಸ್ ಬಹುಮಾನ ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.