
ಕಳಸ: ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಂಡು ಕಂಗಾಲಾದ ಕಾರು ಚಾಲಕ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ರಾತ್ರಿ ನಡೆದಿದೆ.
ರಾತ್ರಿ 10 ಗಂಟೆಗೆ ಕಳಸದಿಂದ ಗೊರಸುಕುಡಿಗೆಗೆ ಹೋಗುತ್ತಿದ್ದ ಕೃಷ್ಣಮೂರ್ತಿ ಅವರ ಮಗ ಶಾಮಕೀರ್ತನ್, ತಮ್ಮ ಮನೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಕಾಡುಕೋಣಗಳ ದೊಡ್ಡ ಹಿಂಡು ಕಂಡು ಭಯಗೊಂಡಿದ್ದಾರೆ. ಇದರಿಂದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಅವರ ತಾಯಿ ನಳಿನಿಗೆ ಗಾಯಗಳಾಗಿವೆ.
ನಳಿನಿ ಅವರಿಗೆ ಕಳಸದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಉಪ ವಲಯ ಅರಣ್ಯಾಧಿಕಾರಿ ಸುಂದರೇಶ್ ಗಾಯಾಳು ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ಪ್ರದೇಶದಲ್ಲಿ ಪ್ರತಿದಿನವೂ ಕಾಡುಕೋಣಗಳ ಹಿಂಡು ರಸ್ತೆಯಲ್ಲಿ ಮತ್ತು ಕೃಷಿ ಭೂಮಿಯಲ್ಲಿ ಇರುತ್ತವೆ. ಅವುಗಳನ್ನು ಕಾಡಿಗೆ ಓಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.