ADVERTISEMENT

ಕಾಡುಕೋಣ ತಿವಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 16:16 IST
Last Updated 31 ಮಾರ್ಚ್ 2020, 16:16 IST

ಕಳಸ: ಹಿರೇಬೈಲು ಸಮೀಪದ ಬೂದಿಗುಂಡಿಯಲ್ಲಿ ಕಾಡುಕೋಣ ತಿವಿದು ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.

ವೀರಪ್ಪ ಪೂಜಾರಿ ಅವರ ಪತ್ನಿ ಮೀನಾಕ್ಷಿ (69) ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ತೋಟಕ್ಕೆ ತೆರಳಿದ್ದಾಗ ಹಿಂದಿನಿಂದ ಬಂದ ಕಾಡುಕೋಣ ಅವರಿಗೆ ತಿವಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅವರಿಗೆ ಪತಿ ಮತ್ತು ಮೂವರು ಮಕ್ಕಳು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT