ADVERTISEMENT

ಚಿಕ್ಕಮಗಳೂರು | ಕಾಡಾನೆ ದಾಳಿ: ಸಾವು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 19:32 IST
Last Updated 16 ಫೆಬ್ರುವರಿ 2026, 19:32 IST
<div class="paragraphs"><p>ಸಾವು (ಸಾಂದರ್ಭಿಕ ಚಿತ್ರ)</p></div>

ಸಾವು (ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಚಿಕ್ಕಮಗಳೂರು: ತಾಲ್ಲೂಕಿನ ಹುಣಸೇಹಳ್ಳಿ ಸಮೀಪದ ಪುರದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕ, ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿಯ ಯಲ್ಲಪ್ಪ ಶೇಖಪ್ಪ ಮಾರೇಕ್ಕನವರ(45) ಮೃತಪಟ್ಟಿದ್ದಾರೆ.

ADVERTISEMENT

ಗಾರೆ ಕೆಲಸ ಮಾಡುತ್ತಿದ್ದ ಅವರು ಬೆಳಗಿನ ಜಾವ ಒಬ್ಬರೇ ನಡೆದು ಹೋಗುತ್ತಿದ್ದಾಗ ಆನೆ ದಾಳಿ ನಡೆಸಿದ್ದು, ಗಾಯಗೊಂಡ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.