
ಚಿಕ್ಕಮಗಳೂರು: ಜಿಲ್ಲಾ ಸಹಕಾರಿ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಸಿ.ಟಿ. ರವಿ ಮತ್ತು ಎಸ್.ಎಲ್. ಭೋಜೇಗೌಡ ಅವರಿಗೆ ಸಹಕಾರ ಕ್ಷೇತ್ರದ ಮತದಾರರು ಬೆಂಬಲ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ಮನವಿ ಮಾಡಿದರು.
ಜಿಲ್ಲೆಯಲ್ಲಿ ನಡೆದ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತರು ಜಯ ಸಾಧಿಸಿದ್ದಾರೆ. ರಾಜಕೀಯದಲ್ಲಿ ಇರುವವರು ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜನರಿಗೆ ಹತ್ತಿರವಾಗಲು ಸಹಾಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಹೇಳಿದರು.
ಬಿಜೆಪಿಯ ಏಳು ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಕೋರ್ ಕಮಿಟಿಯ ನಿರ್ಣಯದಂತೆ ಎರಡು ಕ್ಷೇತ್ರಗಳನ್ನು ಬಿಟ್ಟು ಜೆಡಿಎಸ್ ಬಿಟ್ಟುಕೊಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸೋಮಶೇಖರ್, ಈಶ್ವರಹಳ್ಳಿ ಮಹೇಶ್, ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್, ಪ್ರಕೋಷ್ಠ ಸಂಚಾಲಕ ಚಮಿನ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು.