‘ಮಂಗನ ಕಾಯಿಲೆ’
ಚಿಕ್ಕಮಗಳೂರು: ನರಸಿಂಹರಾಜ ಪುರ ತಾಲ್ಲೂಕಿನ ಕಟ್ಟಿನಮನೆ ಬೂತನಕಾಡು ಗ್ರಾಮದ ಕಮಲಾ (69) ಎಂಬವರು ಮಂಗನ ಕಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗನ ಕಾಯಿಲೆ ಇರುವುದು ದೃಢಪಟ್ಟಿತ್ತು. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮೃತ
ಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.