
ಕೊಪ್ಪ: ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಚ್.ಆರ್.ರೇಖಾ, 'ಕನ್ನಡ ನಾಡಿನಲ್ಲಿ ಹುಟ್ಟಿದಕ್ಕೆ ನಮಗೆ ಹೆಮ್ಮೆಯಾಗಬೇಕು. ನಮ್ಮ ಜತೆಯಲ್ಲಿ ಇರುವ ಅನ್ಯಭಾಷಿಗರಿಗೆ ಕನ್ನಡ ಕಲಿಸುವ ಕೆಲಸ ನಾವು ಮಾಡಬೇಕಾಗಿದೆ' ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜೆ.ಎಂ ಶ್ರೀಹರ್ಷ ಮಾತನಾಡಿದರು. ಕಳೆದ ವರ್ಷ ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಂತರ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಜಾನಪದ ಕಲಾವಿದೆ ಶ್ಯಾಮಲ, ಬೊಮ್ಮಲಾಪುರ ಗ್ರಾಮದ ರಾಜಾಶಂಕರ (ಕೃಷಿ), ಶಮೀಮ್ ಬಿ.ಕುದುರೆಗುಂಡಿ(ಸಮಾಜ ಸೇವೆ), ಅಗಳಗಂಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ (ಜನಸ್ನೇಹಿ ಆಡಳಿತ) ಅವರನ್ನು ಅಭಿನಂದಿಸಲಾಯಿತು.
ತಹಶೀಲ್ದಾರ್ ಲಿಖಿತ ಮೋಹನ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಚ್.ಎಸ್.ಇನೇಶ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ ಶೆಟ್ಟಿ, ಕೆಡಿಪಿ ಸದಸ್ಯರಾದ ಆಶೋಕ್ ನಾರ್ವೆ, ಚಿಂತನ್ ಬೆಳಗೊಳ, ಸಾದಿಕ್ ನಾರ್ವೆ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ಅನ್ನಪೂರ್ಣ ನರೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.