ಆಲ್ದೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನವನ್ನು ಹಾಂದಿಯಲ್ಲಿ ಆಚರಿಸಲಾಯಿತು.
ಜ್ಞಾನವಿಕಾಸ ಮತ್ತು ಪ್ರಗತಿ ಬಂದು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ತಾಲ್ಲೂಕು ಯೋಜನಾಧಿಕಾರಿ ಸುದೀರ್ ಜೈನ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ಸುರೇಶ್, ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮ, ಮಕ್ಕಳು ದುಶ್ಚಟಗಳಿಂದ ಅಂತರ ಕಾಯ್ದುಕೊಳ್ಳುವಂತೆ ಅನುಸರಿಸಬೇಕಾದ ಕ್ರಮಗಳು, ಸಂಸ್ಕೃತಿಯೊಂದಿಗೆ ಸಂಸ್ಕಾರವನ್ನು ಕಲಿಸುವ ಪರಿ ಹೇಗೆ ಎಂದು ಮಾಹಿತಿ ನೀಡಿದರು.
ಒಕ್ಕೂಟದ ಅಧ್ಯಕ್ಷ ಅಣ್ಣಪ್ಪ, ಗಿರಿಜಾ, ವಲಯ ಮೇಲ್ವಿಚಾರಕ ವಿಜಯ್ ಕುಮಾರ್, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಭಾರತಿ, ಸ್ಥಳೀಯ ಸೇವಾ ಪ್ರತಿನಿಧಿ ರೀನಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.