ADVERTISEMENT

ಯುವ ಸಬಲೀಕರಣಕ್ಕೆ ಆದ್ಯತೆ: ಶಾಸಕ

ಯುವ ಪ್ರಶಸ್ತಿ ಪ್ರದಾನ, ಜಿಲ್ಲಾ ಘಟಕದ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 4:57 IST
Last Updated 9 ಆಗಸ್ಟ್ 2022, 4:57 IST
ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಶಾಸಕ ಡಿ.ಎಸ್.ಸುರೇಶ್ ಉದ್ಘಾಟಿಸಿದರು
ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಶಾಸಕ ಡಿ.ಎಸ್.ಸುರೇಶ್ ಉದ್ಘಾಟಿಸಿದರು   

ತರೀಕೆರೆ: ‘ದೇಶವನ್ನು ಪ್ರಗತಿಯತ್ತ ಕೊಂಡೊಯ್ಯವಲ್ಲಿ ಯುವಕರ ಪಾತ್ರ ಮಹತ್ವದಾಗಿದೆ’ ಎಂದು ಶಾಸಕ ಡಿ.ಎಸ್. ಸುರೇಶ್ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಯುವ ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಎಸ್. ಬಾಲಾಜಿ ಮಾತನಾಡಿ, ‘ಯುವಕರಲ್ಲಿ ಭಾವನಾತ್ಮಕ ಸಂಬಂಧ ಬೆಳೆಯಬೇಕು. ಸಮಗ್ರವಾಗಿ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು’ ಎಂದರು.

ADVERTISEMENT

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಎಂ.ಸಿ. ರಮೇಶ್ ಮಾತನಾಡಿ, ‘ಯುವ ಜನ ಸಬಲೀಕರಣ ಕಾರ್ಯಕ್ರಮವನ್ನು ಇಲಾಖೆ ಮಾಡಿತ್ತಿದೆ’ ಎಂದರು. ಇಮ್ರಾನ್ ಅಹಮದ್ ಬೇಗ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಯುವ ಅಧಿಕಾರಿ ಅಭಿಷೇಕ್ ಚಾವರೆ, ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಪೂರ್ಣೆಶ್ ನರಸಿಂಹರಾಜಪುರ, ಎ.ಸಿ. ಚಂದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿದರು. ಸದಸ್ಯ ಟಿ.ಎಂ. ಭೋಜರಾಜ್, ಹಳಿಯೂರು ಕುಮಾರ್, ನವೀನ್ ಕುಮಾರ್, ಭಗವಾನ್ ಇದ್ದರು.

ಮುಂದೂಡಿಕೆ

ಚಿಕ್ಕಮಗಳೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಇದೇ 9 ರಂದು ಹಮ್ಮಿಕೊಂಡಿದ್ದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಪಾದಯಾತ್ರೆಯನ್ನು ಮಳೆಯ ಕಾರಣಕ್ಕೆ ಮುಂದೂಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.