ADVERTISEMENT

ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ: ಶಾಸಕ ಡಿ.ಎಸ್.ಸುರೇಶ್

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 4:27 IST
Last Updated 27 ನವೆಂಬರ್ 2022, 4:27 IST
ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ ಜಿಲ್ಲಾ ಯುವ ಜನನೋತ್ಸವ ಕಾರ್ಯಕ್ರಮವನ್ನು ಶಾಸಕ ಡಿ.ಎಸ್.ಸುರೇಶ್ ಉದ್ಘಾಟಿಸಿದರು
ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ ಜಿಲ್ಲಾ ಯುವ ಜನನೋತ್ಸವ ಕಾರ್ಯಕ್ರಮವನ್ನು ಶಾಸಕ ಡಿ.ಎಸ್.ಸುರೇಶ್ ಉದ್ಘಾಟಿಸಿದರು   

ತರೀಕೆರೆ: ಪ್ರತಿಭೆಗಳ ಅನಾವರಣಕ್ಕೆ ಯುವಜನೋತ್ಸವ ಸಹಕಾರಿ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಅವರು ಪಟ್ಟಣದ ಬಯಲು ರಂಗ ಮಂದಿರದಲ್ಲಿ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ ಆಯೋಜಿಸಿದ್ದ ಜಿಲ್ಲಾ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದರು.

ಚಿಕ್ಕಮಗಳೂರಿನಲ್ಲಿ ರಾಜ್ಯ ಹಾಗೂ ಬೆಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಯುವಜನೋತ್ಸವನ್ನು ಹಮ್ಮಿಕೊಳ್ಳಲಾ
ಗುವುದು. ಜನವರಿ ಯಲ್ಲಿ ಅಖಿಲ ಭಾರತ ಜಾನಪದ ಸಮ್ಮೇಳನವನ್ನು ಪಟ್ಟಣದಲ್ಲಿ ಆಯೋಜಿಸಲಾಗುವುದು ಎಂದು ಅವರು ಹೇಳಿದರು.

ADVERTISEMENT

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್.ಬಾಲಾಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕಿ ಡಾ.ಎಚ್.ಪಿ.ಮಂಜುಳಾ, ಕರ್ನಾಟಕ ರಾಜ್ಯ ಯುವ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಇಮ್ರಾನ್ ಅಹಮದ್ ಬೇಗ್, ಜನಹಿತ ಸಂಸ್ಥೆ ಅಧ್ಯಕ್ಷ ಎನ್.ವೀರಭದ್ರಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಭಗವಾನ್, ಅರಿವು ವೇದಿಕೆ ಶಿವಣ್ಣ, ಬೆಲೇನಹಳ್ಳಿ ಸೋಮಶೇಖರ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಪೆನ್ನಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.