ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಗಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
'ಕೆಲ ತಿಂಗಳಿನಿಂದ ಪಕ್ಷದ ತೀರ್ಮಾನಗಳನ್ನು ಪದೇಪದೇ ಉಲ್ಲಂಘನೆ ಮಾಡಿದ್ದೀರಿ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೀರಿ. ಪಕ್ಷದ ಘನತೆಗೆ ಕುಂದುಂಟು ಮಾಡಿ ಮುಜುಗರಕ್ಕೆ ಕಾರಣರಾಗಿದ್ದೀರಿ' ಎಂದು ಆದೇಶದಲ್ಲಿ ತಿಳಿಸಲಾಗಿದೆ.
'ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ತಿಳಿಸಿದರೂ ಪಾಲಿಸಿಲ್ಲ. ತಕ್ಷಣದಿಂದ ಪಕ್ಷದಿಂದ ಅಮಾನತು ಮಾಡಲಾಗಿದೆ' ಎಂದು ತಿಳಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸುಜಾತಾ ಅವರಿಗೆ ಪಕ್ಷ ಸೂಚನೆ ನೀಡಿತ್ತು. ರಾಜೀನಾಮೆ ನೀಡಲ್ಲ ಎಂದು ಸುಜಾತಾ ಪಟ್ಟುಹಿಡಿದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.