ಮೊಳಕಾಲ್ಮುರು: ಯಾವುದೇ ಸಾಧನೆ ಮಾಡಲು ಶಿಕ್ಷಣದ ಆವಶ್ಯಕತೆ ಬಹುಮುಖ್ಯ ಎಂದು ಸಮನ್ವಯ ಶಿಕ್ಷಣಾಧಿಕಾರಿ ನಯೀಮುರ್ ರೆಹಮಾನ್ ಅಭಿಪ್ರಾಯಪಟ್ಟರು.
ಇಲ್ಲಿನ ದುರ್ಗಾ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಸರ್ವಶಿಕ್ಷಣ ಅಭಿಯಾನ ಜಾರಿ ಮಾಡಿದ ನಂತರ ಇಲಾಖೆಯಲ್ಲಿ ಹಲವು ಕಾರ್ಯಕ್ರಮಗಳು ಅನುಷ್ಠಾನಗೊಂಡಿವೆ. ಆರ್ಥಿಕ ಅಶಕ್ತರು ಸಹ ಉತ್ತಮ ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗುವ ಯೋಜನೆಗಳನ್ನು ಸಹ ಜಾರಿ ಮಾಡಿದ್ದು, ಅರ್ಹರು ಇವುಗಳ ಸದುಪಯೋಗಕ್ಕೆ ಮುಂದಾಗಬೇಕು ಎಂದು ಹೇಳಿದರು.
ಪ.ಪಂ. ಮಾಜಿ ಅಧ್ಯಕ್ಷ ಬಿ.ಜಿ. ಸೂರ್ಯನಾರಾಯಣ್ ಮಾತನಾಡಿ, ವಿದ್ಯೆ ಹಾಗೂ ಗೌರವ ಒಂದೇ ನಾಣ್ಯದ ಎರಡು ಮುಖವಾಗಿದ್ದು, ಅರಿತು ಎಲ್ಲರೂ ವಿದ್ಯಾವಂತರಾಗುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಹೇಳಿದರು. ವಿದ್ಯಾಸಂಸ್ಥೆ ಅಧ್ಯಕ್ಷ ಕೆ. ರಾಮಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಪ.ಪಂ. ಸದಸ್ಯರಾದ ಜಿ. ಪ್ರಕಾಶ್, ಟಿ. ಚಂದ್ರಣ್ಣ, ಬಿಸಿಯೂಟ ಯೋಜನಾಧಿಕಾರಿ ಎಸ್.ಪಿ. ಶಿವಣ್ಣ, ಸಂಸ್ಥೆ ಕಾರ್ಯದರ್ಶಿ ಎನ್. ಮಂಜುನಾಥ್, ಮುಖ್ಯಶಿಕ್ಷಕ ಎಂ. ಮಲ್ಲಿಕಾರ್ಜುನ್, ಜಿ.ಎಸ್. ಲೋಕೇಶ್‌ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಸಾಧನೆ ಮಾಡಿದ ಶಿಕ್ಷಕ ಲತೀಫ್‌ಸಾಬ್ ಮತ್ತು ವಿದ್ಯಾರ್ಥಿಗಳನ್ನು ಹಾಗೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.