ಮೊಳಕಾಲ್ಮುರು: ಶಿಕ್ಷಣ ಇಲಾಖೆ ಜಾರಿಗೆ ತರಲು ಉದ್ದೇಶಿಸಿರುವ ನೂತನ ಕಾಯ್ದೆಗಳನ್ನು ಖಾಸಗಿ ವಿದ್ಯಾಸಂಸ್ಥೆಗಳು ಪಾಲಿಸಲು ಕಡ್ಡಾಯವಾಗಿ ಮುಂದಾಗಬೇಕು ಎಂದು ಶಿಕ್ಷಣ ಸಂಯೋಜಕ ಎಸ್.ಬಿ. ರಾಮಚಂದ್ರಯ್ಯ ಮನವಿ ಮಾಡಿದರು.
ಇಲ್ಲಿನ ಕ್ಷೇತ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಈಚೆಗೆ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಖಾಸಗಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರ ಸಭೆಯಲ್ಲಿ ಅವರು ಮಾತನಾಡಿದರು.
ಖಾಸಗಿ ಶಾಲೆಗಳಲ್ಲಿ ಪ್ರವೇಶ ನೀಡುವ ಕುರಿತು, ಸೀಟುಗಳ ಹಂಚಿಕೆ ಕುರಿತು, ಮೆರಿಟ್ ಕಾಪಾಡುವ ಬಗ್ಗೆ, ಪ್ರವೇಶ ಶುಲ್ಕ ಹಾಗೂ ಬೋಧನಾ ಶುಲ್ಕ ವಿಧಿಸುವ ಕುರಿತು ಇಲಾಖೆ ನೂತನವಾಗಿ ಜಾರಿ ಮಾಡಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಇದರ ಜತೆಗೆ ಸ್ವಚ್ಛತೆ ಕಾಪಾಡಬೇಕು. ಅಪಘಾತ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ, ಕುಡಿಯುವ ನೀರು, ಶೌಚಾಲಯ ಸೌಕರ್ಯಗಳು ಸಹ ಆದೇಶದಲ್ಲಿ ಸೇರ್ಪಡೆಯಾಗಿದ್ದು, ಪಾಲಿಸಬೇಕು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.