ADVERTISEMENT

ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2014, 10:08 IST
Last Updated 4 ಜನವರಿ 2014, 10:08 IST

ಮೊಳಕಾಲ್ಮುರು: ಅಂತರ್ಜಲ ಸಮಸ್ಯೆ ಎದುರಿಸುತ್ತಿರುವ ಮೊಳಕಾಲ್ಮುರು ತಾಲ್ಲೂಕಿನಲ್ಲಿ ರೈತರು ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಮುಂದಾಗ ಬೇಕು ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಸುಬ್ರಮಣ್ಯ ಪ್ರಸಾದ್ ಸಲಹೆ ಮಾಡಿದರು.

ತಾಲ್ಲೂಕಿನ ಜೆ.ಬಿ.ಹಳ್ಳಿಯಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಸ್ಥಳೀಯ ಗ್ರಾಮಪಂಚಾಯ್ತಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ’ಕೃಷಿ ವಿಚಾರ ಸಂಕಿರಣ’ದಲ್ಲಿ ಅವರು ಮಾತನಾಡಿದರು.

ಆಧುನಿಕ ತಂತ್ರಜ್ಞಾನಗಳನ್ನು ಸದುಪಯೋಗ ಮಾಡಿಕೊಂಡು ರೈತರು ಕಡಿಮೆ ಖರ್ಚು, ಕಡಿಮೆ ನೀರಿನಲ್ಲಿ ಉತ್ತಮ ಫಸಲು ಪಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪೂರಕ ಮಾಹಿತಿ ನೀಡಲು ಸಂಸ್ಥೆ ಮುಂದಾಗಿದ್ದು, ಸದುಪಯೋಗ ಮಾಡಿ ಕೊಳ್ಳಲು ಮುಂದಾಗಬೇಕು ಎಂದರು.

ಪಶು ಸಂಗೋಪನೆ ಇಲಾಖೆ ತಾಲ್ಲೂಕು ನಿರ್ದೇಶಕ ಡಾ. ಬೊಮ್ಮಯ್ಯ ‘ಲಾಭದಾಯಕ ಹೈನುಗಾರಿಕೆ ಹಾಗೂ ಪಶುಸಂಗೋಪನೆ’ ಕುರಿತು ಮಾತನಾಡಿದರು.

ತೋಟಗಾರಿಕೆ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಡಾ. ಆರ್. ವಿರೂಪಾಕ್ಷಪ್ಪ ಅವರು,  ‘ಕೃಷಿ ತೋಟಗಾರಿಕೆ ಬೆಳೆಗಳ ತಾಂತ್ರಿಕತೆ’ ಬಗ್ಗೆ ಮಾತನಾಡಿದರು.

ತಾಲ್ಲೂಕು ಪಂಚಾಯ್ತಿ ಸದಸ್ಯ ಹನುಮಂತಪ್ಪ ಉದ್ಘಾಟಿಸಿದರು.ಗ್ರಾಮಪಂಚಾಯ್ತಿ ಅಧ್ಯಕ್ಷೆ ಯಶೋದಮ್ಮ  ಅಧ್ಯಕ್ಷತೆ ವಹಿಸಿದ್ದರು.
ಎಸ್. ಯಶವಂತ್‌, ಹೈನುಗಾರಿಕೆ ಅಧಿಕಾರಿ ರವಿ, ಪಿಡಿಒ ಯಶವಂತ್‌, ಪ್ರಗತಿಬಂಧು    ಶಾಂತಮ್ಮ,  ನಾಗರಾಜ್‌, ಟಿ. ಅಶೋಕ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.