ADVERTISEMENT

ಆಸ್ಪತ್ರೆಗಳ್ಲ್ಲಲೇ ಹೆರಿಗೆ: ವೈದ್ಯರ ಸಲಹೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2012, 4:45 IST
Last Updated 22 ಮಾರ್ಚ್ 2012, 4:45 IST

ಚಿತ್ರದುರ್ಗ: ಹೆರಿಗೆ ಸಮಯದಲ್ಲಿ ಸಂಭವಿಸುವ ಶಿಶು ಮರಣ ಮತ್ತು ತಾಯಿಮರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎನ್. ವೆಂಕಟಶಿವಾರೆಡ್ಡಿ ನುಡಿದರು.

ತಾಲ್ಲೂಕಿನ ತುರುವನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚೆಗೆ ಸಮುದಾಯ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಿಶು ಮರಣ ಮತ್ತು ತಾಯಿ ಮರಣ ಸಂಭವಿಸುವುದನ್ನು ತಡೆಗಟ್ಟಲು ಸಮುದಾಯದ ಸಹಭಾಗಿತ್ವ, ಸಹಕಾರ ಅಗತ್ಯ.

ಆಸ್ಪತ್ರೆಗಳಲ್ಲೇ ಹೆರಿಗೆ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು. ಇಂದಿನ ದಿನಗಳಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯಕ್ಕಾಗಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸ್ಪತ್ರೆಗಳಲ್ಲಿ ಹೆರಿಗೆ ಸಮಯದಲ್ಲಿ ಶಿಶು ಮರಣ ಮತ್ತು ತಾಯಿಮರಣ ಸಂಭವಿಸುವುದು ಅತಿ ವಿರಳ ಎಂದು ವಿವರಿಸಿದರು.

ಕಾಯಿಲೆಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸ್ವಚ್ಛತೆ ಕಾಪಾಡದ ಪರಿಣಾಮ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಆದ್ದರಿಂದ ಪರಿಸರ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಎಚ್ಚರ ವಹಿಸಬೇಕು ಎಂದರು.
ಗ್ರಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ, ತಾ.ಪಂ. ಸದಸ್ಯೆ ಕಮಲಮ್ಮ, ಆಡಳಿತ ವೈದ್ಯಾಧಿಕಾರಿ ಡಾ.ಮಹಮ್ಮದ್ ಫಜಿಲುದ್ದೀನ್ ಸ್ವಾಗತಿಸಿದರು. ಆರೋಗ್ಯ ನಿರೀಕ್ಷಕ ಶ್ರೀನಿವಾಸಮೂರ್ತಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.