ADVERTISEMENT

ಕಾರ್ಮಿಕರಿಗೆ ಪರಿಹಾರ ನೀಡಲು ಆದೇಶ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2013, 6:46 IST
Last Updated 7 ಡಿಸೆಂಬರ್ 2013, 6:46 IST

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಾಣಿ ವಿಲಾಸ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರಿಗೆ ತಲಾ ₨ 10 ಸಾವಿರ ಪರಿಹಾರ ನೀಡಬೇಕು ಎಂದು ಆಡಳಿತ ಮಂಡಳಿಗೆ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಕಾರ್ಮಿಕರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಲ್‌. ಮಂಜುನಾಥ್‌ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು.

ಈ ಕಾರ್ಖಾನೆ ಬಾಗಿಲು ಮುಚ್ಚಿದ ನಂತರ ಕಾರ್ಮಿಕರಿಗೆ ಯಾವುದೇ ಪರಿಹಾರ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಪರಿಹಾರ ನೀಡುವಂತೆ ಆದೇಶಿಸಿತ್ತು. ಹೀಗಿದ್ದರೂ ಕಾರ್ಖಾನೆ ಆದೇಶ ಪಾಲಿಸುತ್ತಿಲ್ಲ ಎಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.