ADVERTISEMENT

ಕ್ರಿಯಾಶೀಲ ಶಿಕ್ಷಕರಿಂದ ಪ್ರಗತಿ ಸಾಧ್ಯ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2013, 5:26 IST
Last Updated 10 ಏಪ್ರಿಲ್ 2013, 5:26 IST

ಹೊಸದುರ್ಗ: ಪ್ರಸ್ತುತ ಅತಂತ್ರದ ರಾಜಕೀಯ ವ್ಯವಸ್ಥೆಯಲ್ಲಿ ಒಂದು ಸುಂದರ ಸಮಾಜ ನಿರ್ಮಾಣ ಆಗಬೇಕಾದರೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುವ ಶಿಕ್ಷಕರ  ಅಗತ್ಯವಿದೆ ಎಂದು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಬಿ. ವೆಂಕಟರಮಣರೆಡ್ಡಿ ತಿಳಿಸಿದರು.

ಮಂಗಳವಾರ ಪಟ್ಟಣದ ಇಂದಿರಾಗಾಂಧಿ ಬಿ.ಇಡಿ ಕಾಲೇಜಿನಲ್ಲಿ ಆಯೋಜಿಸಿದ್ದ ಪೌರತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್. ಕಲ್ಮಠ್, ಪ್ರಾಂಶುಪಾಲ ಟಿ. ಬಸಪ್ಪ, ಆಡಳಿತಾಧಿಕಾರಿ ಕನವಳ್ಳಿ, ಮುಖ್ಯ ಶಿಕ್ಷಕ ರಹಮತ್ ಉಲ್ಲಾ ಮಾತನಾಡಿದರು.

 ಮಂಜುಳಾ, ಬಾನುಮತಿ, ಸಿದ್ದೇಶ್, ಪ್ರಹ್ಲಾದ್ ಶಿಬಿರದ ಅನಿಸಿಕೆ ವ್ಯಕ್ತಪಡಿಸಿದರು. ಲಲಿತಮ್ಮ ಕಾರ್ಯಕ್ರಮ ನಿರೂಪಿಸಿದರು. ರಮ್ಯ ಪ್ರಾರ್ಥಿಸಿದರು. ಅರ್ಪಿತಾ ಸ್ವಾಗತಿಸಿದರು. ಅನಿಲ್ ವಂದಿಸಿದರು.

150 ಮಂದಿ ಗೈರು
ತಾಲ್ಲೂಕಿನಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಹಿಂದಿ ಭಾಷಾ ಪರೀಕ್ಷೆಗೆ 2,966 ವಿದ್ಯಾರ್ಥಿಗಳು ಹಾಜರಿದ್ದರು. 3,116 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದು, 150 ವಿದ್ಯಾರ್ಥಿಗಳು ಗೈರಾಗಿದ್ದರು  ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿಯೇ ಪ್ರಥಮವಾಗಿ ಹೊಸದುರ್ಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ವಿಡಿಯೊ ರೆಕಾರ್ಡಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಈ ವ್ಯವಸ್ಥೆಯನ್ನು ಸಾರ್ವಜನಿಕ ಉಪ ನಿರ್ದೇಶಕರು ಮೆಚ್ಚಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಜಾರಿಗೆ ತರಲು ಪ್ರೆರೇಪಿಸಿದ್ದಾರೆ ಎಂದು ತಿಳಿಸಿದರು.

ಪರೀಕ್ಷಾ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಯಾವುದೇ ಅಕ್ರಮಗಳು ವರದಿಯಾಗಿಲ್ಲ ಎಂದು ಪರೀಕ್ಷಾ ಕಾರ್ಯದ ವೀಕ್ಷಣೆಗೆ ಆಗಮಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಪದನಿಮಿತ್ತ ಸಹ ನಿರ್ದೇಶಕಿ ಸುನಂದಾ ಮುಗನೂರ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.