ADVERTISEMENT

ಖಾತ್ರಿ ಕೆಲಸ: ಗುಳೆ ಹೋಗದಂತೆ ಮನವಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2012, 7:50 IST
Last Updated 5 ಆಗಸ್ಟ್ 2012, 7:50 IST

ಚಿತ್ರದುರ್ಗ:  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಡಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತದೆ. ಯಾರೂ ಸಹ ಗ್ರಾಮ ತೊರೆದು ಉದ್ಯೋಗಕ್ಕಾಗಿ ಗುಳೆ ಹೋಗಬಾರದು ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ರುದ್ರಮುನಿ ತಿಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ನೀಡಲಾಗುತ್ತದೆ. ಇದು ಪ್ರತಿ ಕುಟುಂಬದ ಹಕ್ಕಾಗಿದೆ. ಪುರುಷ ಹಾಗೂ ಮಹಿಳೆಯರಿಗೆ ಸಮಾನವಾಗಿ ್ಙ 155 ವೇತನ ನೀಡಲಾಗುತ್ತದೆ. ಉದ್ಯೋಗ ಖಾತ್ರಿಯಲ್ಲಿ ಕೆಲಸವನ್ನು ನೀಡಲು ಜಿಲ್ಲಾ ಪಂಚಾಯ್ತಿಯಿಂದ ಕ್ರಿಯಾಯೋಜನೆ ಮಂಜೂರಾಗಿದ್ದು, ಕೆಲಸ ಬೇಕು ಎಂದವರು ಗ್ರಾಮ ಪಂಚಾಯ್ತಿಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಲು ಅವರು ತಿಳಿಸಿದ್ದಾರೆ.

ಸಾಮಾನ್ಯಸಭೆ: ಇಲ್ಲಿನ ನಗರಸಭೆಯ ಸಾಮಾನ್ಯಸಭೆ ಆ. 6ರಂದು ಬೆಳಿಗ್ಗೆ 11ಕ್ಕೆ ನಗರಸಭೆ ಕಾರ್ಯಾಲಯದಲ್ಲಿ  ನಡೆಯಲಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.