ಹೊಳಲ್ಕೆರೆ: ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಆದ್ಯತೆ ನೀಡಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ರಾಜಣ್ಣ ಸಲಹೆ ನೀಡಿದರು.ತಾಲ್ಲೂಕಿನ ರಾಮಗಿರಿ ಹೋಬಳಿ ಮುದ್ದಾಪುರ ಲಂಬಾಣಿಹಟ್ಟಿಯಲ್ಲಿ ಶನಿವಾರ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಶಿಕ್ಷಕ ಸದಾ ವಿದ್ಯಾರ್ಥಿ. ನಿರಂತರ ಅಧ್ಯಯನದ ಮೂಲಕ ಹೆಚ್ಚಿನ ವಿಷಯಗಳನ್ನು ಅರಿತು, ಬೋಧನೆಯಲ್ಲಿ ಅಳವಡಿಸಿ ಕೊಳ್ಳಬೇಕು. ಮಕ್ಕಳು ಆಕರ್ಷಿತರಾಗುವ ಕಲಿಕಾ ಸಾಮಗ್ರಿಗಳನ್ನು ತಯಾರಿಸಿಕೊಂಡು ಬೋಧಿಸಿದರೆ, ಕಲಿಕೆ ಪರಿಣಾಮಕಾರಿಯಾಗಿ ಇರುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಗ್ರಾ.ಪಂ. ಸದಸ್ಯೆ ಭಾಗ್ಯಾಬಾಯಿ ಮತ್ತು ಜಯಾನಾಯ್ಕ ಅವರು ವಿದ್ಯಾರ್ಥಿಗಳಿಗೆ ಉಚಿತ ತಟ್ಟೆ, ಲೋಟ ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯಶಿಕ್ಷಕ ಹಾಲಸ್ವಾಮಿ, ಬಿದರಕೆರೆ ಕೃಷ್ಣಪ್ಪ, ವಿನೋದಮ್ಮ, ಓಂಕಾರಪ್ಪ, ಉಮೇಶ ನಾಯ್ಕ, ಯಶೋದಮ್ಮ, ಮೂರ್ತಿ ನಾಯ್ಕ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.