ADVERTISEMENT

ಗ್ರಾಮಗಳ ಅಭಿವೃದ್ಧಿ: ಸಮಗ್ರ ಚಿಂತನೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2011, 6:10 IST
Last Updated 1 ಫೆಬ್ರುವರಿ 2011, 6:10 IST

ಮೊಳಕಾಲ್ಮುರು: ಯಾವುದೇ ಹಂತದ ಜನಪ್ರತಿನಿಧಿಯಾಗಲೀ ಅವರಿಗೆ ಗ್ರಾಮಗಳ ಸಮಗ್ರ ಅಭಿವೃದ್ಧಿ ಧ್ಯೇಯ ಇರಬೇಕಾದುದು ಮುಖ್ಯ ಎಂದು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಬಿ.ಎಸ್. ಮಂಜುನಾಥ್ ಹೇಳಿದರು.ತಾಲ್ಲೂಕಿನ ಬಿ.ಜಿ.ಕೆರೆ ಗ್ರಾ.ಪಂ. ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸ್ವಚ್ಛತೆ, ಶಿಕ್ಷಣಕ್ಕೆ ಸಂಬಂಧಿಸಿದ ಮೂಲ ಸೌಕರ್ಯಗಳನ್ನು ಒದಗಿಸಲು ಸರ್ವರೂ ಮುಂದಾಗಬೇಕು. ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾ.ಪಂ.ನ ಪಾತ್ರ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಬಿ.ಜಿ.ಕೆರೆ ಗ್ರಾ.ಪಂ.ಗೆ 2011-12ರಲ್ಲಿ ಉದ್ಯೋಗಖಾತ್ರಿ ಯೋಜನೆ ಅಡಿಯಲ್ಲಿ ್ಙ 1.36 ಕೋಟಿ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಈ ಪೈಕಿ ್ಙ 30 ಲಕ್ಷಗಳನ್ನು ಸಾಮಾಜಿಕ ಅರಣ್ಯ ಇಲಾಖೆ ವ್ಯಾಪ್ತಿಗೆ ನೀಡಲಾಗಿದೆ ಎಂದರು.

ಜಿ.ಪಂ. ಸದಸ್ಯೆ ಮಾರಕ್ಕ ಮಾತನಾಡಿ, ಮುಂದಿನ ದಿನಗಳಲ್ಲಿ ಕುಡಿಯುವ ನೀರು, ರಸ್ತೆ, ಶಿಕ್ಷಣಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ತಿಳಿಗೊಳಿಸಲು ತಾವು ಪ್ರಾಮಾಣಿಕ ಯತ್ನ ಮಾಡುವುದಾಗಿ ಹೇಳಿದರು.

ಉದ್ಯೋಗಖಾತ್ರಿ ಯೋಜನೆಯಲ್ಲಿ ರೈತರಿಗೆ ನೀರಿನ ತೊಟ್ಟಿಗಳನ್ನು ನಿರ್ಮಿಸಲು ಪ್ರತಿ ತೊಟ್ಟಿಗೆ ್ಙ 50 ಸಾವಿರ ಅನುದಾನ ನೀಡಲಾಗುವುದು. ಈ ವರ್ಷ ತಾಲ್ಲೂಕಿನಲ್ಲಿ ಒಟ್ಟು 29 ನೀರಿನ ತೊಟ್ಟಿಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಈ ಹಿಂದೆ ಪ್ರತಿ ತೊಟ್ಟಿಯನ್ನು ್ಙ 20 ಸಾವಿರ ವೆಚ್ಚದಂತೆ ಸರ್ಕಾರಕ್ಕೆ ಕ್ರಿಯಾಯೋಜನೆ ಸಲ್ಲಿಸಲಾಗಿತ್ತು ಎಂದರು.ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷ ಎಲ್. ಮಂಜುನಾಥ್ ವಹಿಸಿದ್ದರು.

ತಾ.ಪಂ. ಸದಸ್ಯೆ ಮಾರಕ್ಕ, ಗ್ರಾ.ಪಂ. ಉಪಾಧ್ಯಕ್ಷ ಪಾಲಯ್ಯ, ಸದಸ್ಯರಾದ ಅತಾವುಲ್ಲಾ ಖಾನ್, ಜಯಣ್ಣ, ಅಜ್ಜಯ್ಯ, ಮೊಗಲಹಳ್ಳಿ ಜಯಣ್ಣ, ಪಾಪಣ್ಣ, ಕೃಷ್ಣಪ್ಪ, ತಿಪ್ಪೇಸ್ವಾಮಿ, ಬಸಣ್ಣ, ಪಾಲಯ್ಯ, ಗೋಪಿ, ಗುರುವಯ್ಯ, ರಾಧಮ್ಮ, ಬಸವರಾಜ್, ಪಾಲಯ್ಯ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.