ADVERTISEMENT

ಚಿತ್ರದುರ್ಗ ಬಸ್ ನಿಲ್ದಾಣದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ: ವ್ಯಕ್ತಿಗೆ ಥಳಿತ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2019, 7:20 IST
Last Updated 9 ಮಾರ್ಚ್ 2019, 7:20 IST
   

ಚಿತ್ರದುರ್ಗ: ಬಸ್ ನಿಲ್ದಾಣದಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯೊಬ್ಬರಿಗೆ ಸಾರಿಗೆ ಇಲಾಖೆ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಥಳಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಗರದ ಚೇಳಗುಡ್ಡ ಬಡಾವಣೆ ನಿವಾಸಿ ಮಂಜುನಾಥ ಏಟು ತಿಂದ ವ್ಯಕ್ತಿ.

ಕುಡಿದ ಅಮಲಿನಲ್ಲಿ ಬಸ್ ನಿಲ್ದಾಣಕ್ಕೆ ಬಂದ ಮಂಜುನಾಥ ಮಹಿಳೆಯೊಬ್ಬರಿಗೆ ಸನ್ನೆ ಮಾಡಿ ಅನುಚಿತ ವರ್ತನೆ ತೋರಿದ್ದಾರೆ. ಇದನ್ನು ಪ್ರಶ್ನಿಸಿದ ಮಹಿಳೆ ವಿರುದ್ಧ ಗಲಾಟೆಗೆ ಇಳಿದಿದ್ದಾರೆ. ಸ್ಥಳದಲ್ಲೇ ಇದ್ದ ಸಾರಿಗೆ ಇಲಾಖೆ ಸಿಬ್ಬಂದಿ ಆರೋಪಿಯನ್ನು ಹಿಡಿದು ಥಳಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ. ಸ್ಥಳಕ್ಕೆ ಬಂದ ಕೋಟೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.