ADVERTISEMENT

ಚಿತ್ರದುರ್ಗ: ವಿವಿಧೆಡೆ ಗುಡುಗು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 9 ಮೇ 2018, 9:32 IST
Last Updated 9 ಮೇ 2018, 9:32 IST

ಚಿತ್ರದುರ್ಗ: ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಕೆಲವೆಡೆ ಚದುರಿದಂತೆ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ  ಗುಡುಗು, ಬಿರುಗಾಳಿ ಸಹಿತ ಉತ್ತಮ ಮಳೆ ಸುರಿದಿದೆ. ಮಂಗಳವಾರ ಸಂಜೆಯಿಂದ ಮೋಡ ಕವಿದ ವಾತಾವರಣವಿತ್ತು. ರಾತ್ರಿ 8 ಗಂಟೆಯ ಸುಮಾರಿಗೆ ಬಿರುಗಾಳಿ ಕಾಣಿಸಿಕೊಂಡಿತು. ಇದರ ಬೆನ್ನಲ್ಲೇ ಸಿಡಿಲು ಅಬ್ಬರಿಸಿ ಮಳೆ ಸುರಿಯಿತು. ಹೊಸದುರ್ಗದಲ್ಲಿ ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ಹರಿಯಿತು.

ಚಿತ್ರದುರ್ಗ ನಗರದಲ್ಲಿಯೂ ಸಿಡಿಲು ಅಪ್ಪಳಿಸಿತು. ಬಿರುಗಾಳಿ ಸಹಿತ ತುಂತುರು ಮಳೆ ಸುರಿಯಿತು. ಸುಮಾರು
ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು. ಹೊಳಲ್ಕೆಯಲ್ಲಿ ಗುಡುಗು ಮಿಂಚಿನ ಆರ್ಭಟ ಜೋರಾಗಿತ್ತು.

ADVERTISEMENT

ಚಳ್ಳಕೆರೆ ತಾಲ್ಲೂಕಿನ ನಾಯಕನ ಹಟ್ಟಿಯಲ್ಲಿಯೂ  ವರುಣನ ಸಿಂಚನವಾಯಿತು. ಸುಮಾರು 15 ನಿಮಿಷ ಸುರಿದ ಮಳೆಗೆ ಇಳೆ ತಂಪಾಯಿತು. ಭರಮಸಾಗರದಲ್ಲಿಯೂ ಮಳೆಯಾಗಿದೆ. ತೆಂಗಿನಮರಗಳಿಗೆ ಸಿಡಿಲು ಬಡಿದಿದೆ. ವಿದ್ಯುತ್‌ ಸ್ಥಗಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.