ಚಿತ್ರದುರ್ಗ: ಪರಿಶಿಷ್ಟರಿಗೆ ಜಾತಿ ನಿಂದನೆ ಉಂಟಾದರೆ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಡಿ ಎಂಬುದಾಗಿ ನಾನು ಹೇಳಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಸ್ಪಷ್ಟಪಡಿಸಿದರು.
ನಗರದ ವಾರ್ತಾ ಇಲಾಖೆ ಭವನದಲ್ಲಿ ಭಾನುವಾರ ಅವರು ಮಾತನಾಡಿದರು.
`ದೌರ್ಜನ್ಯ ಪ್ರಕರಣ ದಾಖಲಿಸುವ ಮೊದಲು ನನ್ನ ಗಮನಕ್ಕೆ ತಂದು ನಂತರ ಪ್ರಕರಣ ದಾಖಲಿಸಿ ಎಂದು ಹೇಳಿದ್ದೆ. ನನ್ನ ಹೇಳಿಕೆಯನ್ನು ಬೇರೆಯವರು ಅರ್ಥೈಸಿಕೊಂಡಿಲ್ಲ. ಎಲ್ಲ ಜನಾಂಗದವರೊಂದಿಗೆ ದಲಿತರು ಸಹಬಾಳ್ವೆಯಿಂದ ಜೀವನ ನಡೆಸಿದಾಗ ಮಾತ್ರ ಸಮಾಜ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ' ಎಂದು ಸಚಿವರು ತಿಳಿಸಿದರು.
`ಸಮಾಜದಲ್ಲಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯಬಾರದು ಎನ್ನುವ ಉದ್ದೇಶದಿಂದ ಒಮ್ಮೆ ನನ್ನ ಗಮನಕ್ಕೆ ತನ್ನಿ ಎನ್ನುವುದಾಗಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿದ್ದೆ' ಎಂದು ಅವರು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸೇತೂರಾಂ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.