ADVERTISEMENT

ತಂಬಾಕು ಮುಕ್ತ ಸಮಾಜ: ಸಹಿ ಆಂದೋಲನ

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 15:02 IST
Last Updated 1 ಜೂನ್ 2019, 15:02 IST
ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಚಿತ್ರದುರ್ಗದಲ್ಲಿ ಶನಿವಾರ ನಡೆದ ತಂಬಾಕು ಮುಕ್ತ ಸಹಿ ಆಂದೋಲನಕ್ಕೆ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಚಾಲನೆ ನೀಡಿದರು
ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಚಿತ್ರದುರ್ಗದಲ್ಲಿ ಶನಿವಾರ ನಡೆದ ತಂಬಾಕು ಮುಕ್ತ ಸಹಿ ಆಂದೋಲನಕ್ಕೆ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಚಾಲನೆ ನೀಡಿದರು   

ಚಿತ್ರದುರ್ಗ:ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಶನಿವಾರ ಇಲ್ಲಿನ ವಿವಿಧೆಡೆ ಸಹಿ ಆಂದೋಲನ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಆಯೋಜಿಸಿದ್ದ ಸಹಿ ಆಂದೋಲನಕ್ಕೆಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಚಾಲನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಕಚೇರಿ ಆವರಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿ ವಿವಿಧೆಡೆ ಸಹಿ ಆಂದೋಲನ ಮುಂದುವರೆಯಿತು.

ADVERTISEMENT

ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಂದ ಸಹಿ ಸಂಗ್ರಹಿಸುವ ಮೂಲಕ ತಂಬಾಕು ಮುಕ್ತ ಪೀಳಿಗೆಗೆ ಪ್ರತಿಜ್ಞೆ ಮತ್ತು ಬೆಂಬಲ ನೀಡುವಂತೆ ಜಾಗೃತಿ ಮೂಡಿಸಲಾಯಿತು.ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.