ADVERTISEMENT

ಪರೀಕ್ಷಾ ಸಮಯದಲ್ಲಿ ಅಂತರ್ಜಾಲ ತರಬೇತಿ!

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 4:40 IST
Last Updated 4 ಅಕ್ಟೋಬರ್ 2012, 4:40 IST

ಚಿತ್ರದುರ್ಗ: ಅರ್ಧ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದ್ಲ್ಲಲೇ `ಅಂತರ್ಜಾಲ ಪ್ರಪಂಚ~ ಕಾರ್ಯಕ್ರಮ ಆಯೋಜಿಸಿದ್ದರಿಂದ ಪ್ರೌಢಶಾಲಾ ವಿದ್ಯಾರ್ಥಿಗಳು ಗೊಂದಲದಲ್ಲಿ ಮುಳುಗಿದರು.

ನಗರದ ಗುರುಭವನದಲ್ಲಿ ಬುಧವಾರ ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ್ಜಾಲ ಪ್ರಪಂಚ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕಾಗಿಯೇ ಕೋಟೆ ಶಾಲೆ ವಿದ್ಯಾರ್ಥಿಗಳು ಪರೀಕ್ಷೆ ಬಿಟ್ಟು ಬಂದು ಭಾಗವಹಿಸಿದರು.

ಸೆ. 28ರಿಂದ ಅರ್ಧವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಅ. 6ರವರೆಗೆ ನಡೆಯಲಿದೆ. ಆದರೆ, ಅರ್ಧವಾರ್ಷಿಕ ಪರೀಕ್ಷೆ ಸಮಯದಲ್ಲಿ ಅಂತರ್ಜಾಲ ಪ್ರಪಂಚ ಕಾರ್ಯಕ್ರಮ ಕೈಗೊಂಡಿದ್ದು ಚರ್ಚೆಗೆ ಗ್ರಾಸವಾಯಿತು. ವಿದ್ಯಾರ್ಥಿಗಳು ಉದ್ಘಾಟನಾ ಕಾರ್ಯಕ್ರಮದ ನಂತರ ಪರೀಕ್ಷೆ ಬರೆಯಲು ಹೊರನಡೆದರು.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಷಯ ಪರೀವಿಕ್ಷಕ ಓಬಯ್ಯ, ರಾಜ್ಯ ಮಾಹಿತಿ ತಂತ್ರಜ್ಞಾನ ಇಲಾಖೆ ಆದೇಶದ ಮೇರೆಗೆ ರಾಜ್ಯಾದ್ಯಂತ ಅ. 3ರಿಂದ 5ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಅದೇ ರೀತಿ ಜಿಲ್ಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.