ADVERTISEMENT

ಪ್ರತಿಭಟನೆಗೆ ಎತ್ತುಗಳೂ ಬಂದವು..

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2017, 8:58 IST
Last Updated 24 ಡಿಸೆಂಬರ್ 2017, 8:58 IST

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಬಗರ್ ಹುಕುಂ ಮತ್ತು ಅರಣ್ಯ ಸಾಗುವಳಿದಾರರು ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಮುಂದುವರಿದಿದೆ. ಸಾಗುವಳಿದಾರರು ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ತಮ್ಮ ಎತ್ತುಗಳನ್ನು ತಂದು ಕಟ್ಟಿ, ಮೇವು ಹಾಕಿ, ತಮಟೆ ಬಾರಿಸುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಚಳ್ಳಕೆರೆ ತಾಲ್ಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎಂ.ಎಸ್.ಬಣ) ಕಾರ್ಯಕರ್ತರು ವಿಜಾಪುರದಲ್ಲಿ ದಲಿತ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಖಂಡಿಸಿ, ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT