ADVERTISEMENT

ಬರ ಪರಿಹಾರ ನಿರ್ವಹಣೆ: ಸಮಿತಿ ರಚನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 10:00 IST
Last Updated 10 ಏಪ್ರಿಲ್ 2012, 10:00 IST

ಚಿತ್ರದುರ್ಗ: ಜನ ಮತ್ತು ಜಾನುವಾರು ರಕ್ಷಣೆಗೆ ಜಿಲ್ಲೆಯ ಎಲ್ಲ ಪಕ್ಷಗಳ ಶಾಸಕರನ್ನು ಒಳಗೊಂಡ ಬರ ಪರಿಹಾರ ನಿರ್ವಹಣಾ ಸಮಿತಿ ರಚಿಸಿ, ಅಧಿಕಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸರ್ಕಾರವನ್ನು ಒತ್ತಾಯಿಸಿದೆ.

ಬರಗಾಲಕ್ಕೆ ತುತ್ತಾಗಿರುವ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ನಿರ್ವಹಣೆಯಲ್ಲಿ ಸಾಕಷ್ಟು ಲೋಪವಾಗುತ್ತಿದ್ದೆ. ರೈತರು ಜಾನುವಾರುಗಳನ್ನು ಸಾಕಲಾಗದೇ ಸಿಕ್ಕಷ್ಟು ಬೆಲೆಗೆ ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದಾರೆ. ಅಗತ್ಯವಿರುವ ಕಡೆ ಗೋಶಾಲೆ ಆರಂಭಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದೆ.

ಜಿಲ್ಲೆಯ ಉಸ್ತುವಾರಿ ಸಚಿವರು ಜಿಲ್ಲೆಯ ಬರದ ಬಗ್ಗೆ ಕಾಳಜಿ ವಹಿಸದೇ ರಾಜಕೀಯ ದೊಂಬರಾಟದಲ್ಲಿ ತೊಡಗಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಲು ಬರಪರಿಹಾರ ನಿರ್ವಹಣಾ ಸಮಿತಿ ರಚಿಸಿ ಅಧಿಕಾರ ನೀಡಬೇಕು ಎಂದು ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಬಾಗೇನಾಳ್ ಕೊಟ್ರಬಸಪ್ಪ, ಆರ್.ಬಿ. ನಿಜಲಿಂಗಪ್ಪ ಆಗ್ರಹಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.