ADVERTISEMENT

ಮತದಾರರ ಜಾಗೃತಿಗೆ ಮೋಂಬತ್ತಿ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2013, 5:43 IST
Last Updated 9 ಏಪ್ರಿಲ್ 2013, 5:43 IST

ಚಿತ್ರದುರ್ಗ: ರಾಜ್ಯದ ಮತದಾರರು ಮೇ 5ರಂದು ನಡೆಯುವ ವಿಧಾನಸಭೆ ಚುನಾವಣೆಗೆ ತಪ್ಪದೇ ಮತದಾನದಲ್ಲಿ  ಭಾಗವಹಿಸಿ ತಮ್ಮ ಹಕ್ಕು ಚಲಾಯಿಬೇಕು ಎಂದು ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಕಚೇರಿ ಮತ್ತು ಒನಕೆ ಓಬವ್ವ ವೃತ್ತದಲ್ಲಿ ಮೋಂಬತ್ತಿ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

ಹೆಚ್ಚುವರಿ ಜಿಲ್ಲಾಧಿಕಾರಿ ಕಾಶಿನಾಥ್ ಪವಾರ್ ಕಾರ್ಯಕ್ರಮ ಉದ್ಘಾಟಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆ ಎತ್ತಿಹಿಡಿಯುತ್ತೇವೆ. ಅಲ್ಲದೆ ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆ ಎಂದು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಜಿ.ಪಂ. ಯೋಜನಾ ನಿರ್ದೇಶಕ ಲಕ್ಷ್ಮೀನಾರಾಯಣ್, ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಕುಮುದಾನಾಯಕ್, ಜಿಲ್ಲಾ ವಾರ್ತಾಧಿಕಾರಿ ಎಸ್. ಮಹೇಶ್ವರಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹಾಲಿಂಗಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಜಿ. ಶಿವಣ್ಣ ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.