ADVERTISEMENT

ಮೆಕ್ಕೆಜೋಳ ಬೆಂಬಲಬೆಲೆ ಖರೀದಿ ಕೇಂದ್ರ ಆರಂಭ

​ಪ್ರಜಾವಾಣಿ ವಾರ್ತೆ
Published 13 ಜನವರಿ 2011, 5:55 IST
Last Updated 13 ಜನವರಿ 2011, 5:55 IST

ಚಿತ್ರದುರ್ಗ: ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಚಿತ್ರದುರ್ಗ ಘಟಕದಿಂದ ಜಿಲ್ಲೆಯ ವಿವಿಧೆಡೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲಾಗಿದೆ.

ಜಿಲ್ಲೆಯ ಚಿತ್ರದುರ್ಗದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ ಹಾಗೂ ತಾಲ್ಲೂಕಿನ ಭರಮಸಾಗರ ಮತ್ತು ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರಿನ ಉಪ ಮಾರುಕಟ್ಟೆ ಆವರಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಪ್ರತಿ ಕ್ವಿಂಟಲ್‌ಗೆ ರೂ 880ಕ್ಕೆ ಈಗಾಗಲೇ ಮೆಕ್ಕೆಜೋಳ ಖರೀದಿ  ಮಾಡುತ್ತಿದ್ದು, ಜ. 31ರವರೆಗೆ ಮೆಕ್ಕೆಜೋಳ ಖರೀದಿಸಲಾಗುತ್ತದೆ. ಉತ್ತಮ ಗುಣಮಟ್ಟದ ಮೆಕ್ಕೆಜೋಳ ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತದೆ ಎಂದು ಸಹಕಾರ ಮಾರಾಟ ಮಹಾಮಂಡಳಿ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.