ADVERTISEMENT

ರಾಜಕೀಯದಲ್ಲಿ ಪ್ರಾಮಾಣಿಕ ಸೇವೆ: ಶಿವರಾಂ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2013, 8:47 IST
Last Updated 17 ಸೆಪ್ಟೆಂಬರ್ 2013, 8:47 IST

ಚಿತ್ರದುರ್ಗ: ಜನರ ಸಂಕಷ್ಟಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ಸಲುವಾಗಿ ರಾಜಕೀಯಕ್ಕೆ ಬರುತ್ತಿದ್ದೇನೆ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಂ ತಿಳಿಸಿದರು.

ತಾಲ್ಲೂಕಿನ ಚಿಕ್ಕಪುರ ಗೊಲ್ಲರಹಟ್ಟಿಯಲ್ಲಿ ಸೋಮವಾರ ಛಲವಾದಿ ಮಹಾಸಭಾದ ವಿನಾಯಕ ಗೆಳೆಯರ ಬಳಗದ ವತಿಯಿಂದ ಪ್ರತಿಷ್ಠಾಪಿಸಿರುವ ವಿನಾಯಕ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಚಿತ್ರದುರ್ಗ ನನಗೆ ಇಷ್ಟವಾದ ಜಿಲ್ಲೆಯಾಗಿದ್ದು, ಮುಂಬರುವ ಲೋಕಸಭೆಗೆ ಇಲ್ಲಿಂದ ಸ್ಪರ್ಧಿಸಲು ನಿರ್ಧರಿಸಿದ್ದು, ನಾನು ಕೂಡ ಕಾಂಗ್ರೆಸ್‌ ಟಿಕೆಟ್‌ನ ಆಕಾಂಕ್ಷಿಯಾಗಿದ್ದೇನೆ’ ಎಂದರು.

‘ಮುಂಬರುವ ದಿನಗಳಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಗೂ ಕೂಡ ಭೇಟಿ ನೀಡಿ ಜನರೊಂದಿಗೆ ಬೆರೆತು. ಅವರ ಕಷ್ಟಗಳಲ್ಲಿ ನಾನು ಕೂಡ ಭಾಗಿಯಾಗಿ ಸೇವೆ ಮಾಡುವ ಉದ್ದೇಶ ಹೊಂದಿದ್ದೇನೆ’ ಎಂದು ಹೇಳಿದರು.

ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ರಾಜ್ಯ ಪ್ರದೇಶ ಜನತಾದಳದ ರಾಜ್ಯ ಘಟಕದ ಕಾರ್ಯದರ್ಶಿ ಎಚ್‌.ಹಾಲೇಶಪ್ಪ, ಛಲವಾದಿ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಅಣ್ಣಪ್ಪಸ್ವಾಮಿ, ಗ್ರಾಮ ಪಂಚಾಯ್ತಿ ಸದಸ್ಯರಾದ ಮಂಜಪ್ಪ, ಈರಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.