ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳ ಮುಷ್ಕರ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 6:51 IST
Last Updated 27 ಮಾರ್ಚ್ 2018, 6:51 IST
ಚಿತ್ರದುರ್ಗದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮುಂಭಾಗದಲ್ಲಿ  ಸೋಮವಾರ ಬ್ಯಾಂಕ್ ಉದ್ಯೋಗಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮುಂಭಾಗದಲ್ಲಿ ಸೋಮವಾರ ಬ್ಯಾಂಕ್ ಉದ್ಯೋಗಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ಪ್ರೇರಕ ಬ್ಯಾಂಕಿನಲ್ಲಿರುವ ನಿವೃತ್ತಿ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇಲ್ಲಿನ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮುಂಭಾಗದಲ್ಲಿ ಸೋಮವಾರ ಅಖಿಲ ಭಾರತ ಗ್ರಾಮೀಣ ಉದ್ಯೋಗಿಗಳು ಮೂರು ದಿನ ಮುಷ್ಕರ ಹಮ್ಮಿಕೊಂಡಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಣಕಾಸು ಸಚಿವರನ್ನು ಈಚೆಗೆ ಪ್ರತ್ಯೇಕವಾಗಿ ಭೇಟಿ ಮಾಡಿ ಗ್ರಾಮೀಣ ಬ್ಯಾಂಕ್ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದೇ ಇರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮೀಣ ಬ್ಯಾಂಕ್‌ಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಬಾರದು. ಅನುಕಂಪ ಆಧಾರಿತ ನೇಮಕಾತಿ ಜಾರಿಗೊಳಿಸಬೇಕು. ಪ್ರೇರಕ ಬ್ಯಾಂಕಿನ ಸೇವಾ ನಿಯಮಗಳ ನೇರ ನೇಮಕಾತಿ ಮತ್ತು ಬಡ್ತಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರೇರಕ ಬ್ಯಾಂಕ್‌ಗಳಲ್ಲಿ ಜಾರಿಯಾಗಿರುವ ಗಣಕಯಂತ್ರ ಇಂಕ್ರಿಮೆಂಟ್ ಜಾರಿಗೊಳಿಸಬೇಕು. ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಎಲ್ಲ ಕ್ಯಾಜುವಲ್ ನೌಕರರನ್ನು ಕಾಯಂಗೊಳಿಸಬೇಕು. ಅಲ್ಲದೇ ಐಬಿಎ ಮಾದರಿಯಲ್ಲಿ ಸಂಧಾನ ವೇದಿಕೆ ಸ್ಥಾಪಿಸಬೇಕು ಎಂದು ಪ್ರತಿಭಟನಾ ನಿರತ ಬ್ಯಾಂಕ್ ಸಿಬ್ಬಂದಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.